ಬೀದರ್‌ | ಕಾಯಕ ನಿಷ್ಠೆ ಮೆರೆದ ಹಡಪದ ಅಪ್ಪಣ್ಣ : ಈಶ್ವರ ಉಳ್ಳಾಗಡ್ಡಿ

Date:

ಬಸವಾದಿ ಶರಣರ ಸಮಕಾಲೀನ ಶರಣ ಹಡಪದ ಅಪ್ಪಣ್ಣ ಅವರ ಬದುಕು-ಬರಹ ವಚನಗಳಲ್ಲಿ ಅಡಕವಾಗಿದ್ದು, ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.

- Advertisement -

ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮದಿರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ʼವಚನಕಾರ ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತರಾಗಿದ್ದರು, ಕಾಯಕ ತತ್ವದಲ್ಲಿಅತ್ಯಂತ ನಿಷ್ಠೆ ತೋರಿದರು. ಅವರ ವಚನಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿವೆʼ ಎಂದರು.

ಹಿರಿಯ ಸಾಹಿತಿ ಶಂಭುಲಿಂಗ ವಿ.ಕಾಮಣ್ಣನವರ ಅವರು ವಿಶೇಷ ಉಪನ್ಯಾಸ ನೀಡಿ, ʼವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಬಿನಾಳ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ಚನ್ನವೀರಪ್ಪ, ತಾಯಿ ದೇವಮ್ಮ ಆಗಿದ್ದರು. ಅಪ್ಪಣ್ಣನವರು ಕ್ಷೌರ ಮಾಡುವ ಕಾಯಕ ಮಾಡುತ್ತಿದ್ದರು. ಕಾಯಕ ನಿಷ್ಠರಾಗಿದ್ದ ಅವರು ಲಿಂಗಮ್ಮಳೊಂದಿಗೆ ವಿವಾಹವಾದರು. ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಬದುಕಿನ ಕೊನೆಯವರೆಗೂ ಸಮಸಮಾಜಕ್ಕಾಗಿ ಅನೇಕ ವಚನಗಳನ್ನು ರಚಿಸಿದ್ದಾರೆʼ ಎಂದರು.

ಇದನ್ನೂ ಓದಿ : ಬೀದರ್‌ | ಸರ್ಕಾರದ 2 ವರ್ಷಗಳ ಸಾಧನೆಯ ಪ್ರದರ್ಶನಕ್ಕೆ ಚಾಲನೆ: ಗಮನ ಸೆಳೆಯುವ ಸಿಎಂ ಸಿದ್ದರಾಮಯ್ಯ ಸೆಲ್ಫಿ ಪಾಯಿಂಟ್‌ !

ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಸಮಾಜ ಸಂಘದ ದತ್ತಾತ್ರಿ ಬಾಂದೇಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಹಡಪದ ಸಮಾಜದ ಯುವ ಘಟಕದ ಅಧ್ಯಕ್ಷ ಸಂಗಮೇಶ, ರವೀಂದ್ರ ಡಿಗ್ಗಿ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...