ಬೀದರ್‌ | ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿಗೆ ಕಿಸಾನ್ ಸಭಾ ಆಗ್ರಹ

Date:

ಬೀದರ ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ನಿಗದಿಪಡಿಸುವಂತೆ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿ ಕರ್ನಾಟಕ ಸರಕಾರಕ್ಕೆ ಮನವಿ ಸಲ್ಲಿಸಿದೆ.

- Advertisement -

ಈ ಸಂಬಂಧ ಮಂಡಳಿಯ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ ಮಾತನಾಡಿ, ʼರೈತರು ಬೆವರು ಸುರಿಸಿ ಕಬ್ಬು ಬೆಳೆದು ಅನ್ನ ನೀಡುತ್ತಿದ್ದಾರೆ. ಆದರೆ ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಮತ್ತು ಸರ್ಕಾರದ ರೈತ ವಿರೋಧಿ ನೀತಿಗಳಿಂದ ರೈತರ ಬದುಕು ದುಸ್ಥಿತಿಗೆ ತಲುಪಿದೆ. ಕಬ್ಬಿಗೆ ನ್ಯಾಯಯುತ ದರ ನೀಡದಿದ್ದರೆ ಹೋರಾಟ ತೀವ್ರಗೊಳ್ಳಲಿದೆʼ ಎಂದು ಎಚ್ಚರಿಸಿದರು.

ʼಪ್ರತಿವರ್ಷ ಸಕ್ಕರೆ ಕಾರ್ಖಾನೆ ಮಾಲಿಕರು ಕಬ್ಬಿನ ದರವನ್ನು ಸರಿಯಾಗಿ ನಿಗದಿಪಡಿಸದೆ, ರೈತರಿಗೆ ಹಣವನ್ನು ಸಮಯಕ್ಕೆ ನೀಡದೇ ಇರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕೆಲ ಕಾರ್ಖಾನೆ ಮಾಲಿಕರು ರೈತರ ಪಹಾಣಿ ಪತ್ರದ ಮೂಲಕ ಬ್ಯಾಂಕ್‌ಗಳಿಂದ ಸಾಲ ಪಡೆದುಕೊಳ್ಳುತ್ತಿರುವುದು ಹಾಗೂ ಬ್ಯಾಂಕ್‌ಗಳು ರೈತರ ಮೇಲೆ ಸಾಲ ಮರುಪಾವತಿಗೆ ಒತ್ತಡ ಹೇರುತ್ತಿರುವುದು ಖಂಡನೀಯವಾಗಿದೆʼ ಎಂದರು.

ಕೇಂದ್ರ ಸರ್ಕಾರ ಕಬ್ಬಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಡಾ.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ನಿಗದಿಪಡಿಸದಿರುವುದನ್ನು ವಿರೋಧಿಸುವ ಮೂಲಕ, ಕಬ್ಬಿಗೆ 355 ರೂ. ಪ್ರತಿ ಕ್ವಿಂಟಲ್ ದರ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಒಟ್ಟು 5,325 ರೂ. ಪ್ರತಿ ಟನ್ ದರ ನಿಗದಿ ಮಾಡಬೇಕುʼ ಎಂದು ಒತ್ತಾಯಿಸಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಹರಿಯಾಣದ ‘ಮಹಾ ಮತಗಳ್ಳತನ’ ಮತ್ತು ಚುನಾವಣಾ ಆಯೋಗವೆಂಬ ಮೋದಿ ‘ಪಂಜರದ ಗಿಳಿ’

ಮಂಡಳಿಯ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಚೊಂಡಿ, ತಾಲೂಕಾಧ್ಯಕ್ಷ ಎಂ.ಡಿ. ಖಮರ್ ಪಟೇಲ್ ಸೇರಿದಂತೆ ಬಸವರಾಜ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...