ಬೀದರ್‌ | ಶಾಲಾ ಅವ್ಯವಸ್ಥೆ ಸುಧಾರಣೆಗೆ ಮನೆ-ಮನೆಗೆ ಭಿಕ್ಷೆ ಬೇಡಿದ ಕೆಆರ್‌ಎಸ್ ಕಾರ್ಯಕರ್ತರು

Date:

ಔರಾದ್‌ ತಾಲೂಕಿನ ಬಲ್ಲೂರ(ಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಸುಧಾರಣೆಗೆ ಸ್ಪಂದಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸೋಮವಾರ ಗ್ರಾಮದ ಮನೆ-ಮನೆಗೆ ಭಿಕ್ಷೆ ಬೇಡುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

- Advertisement -

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಬೆಳಿಗ್ಗೆ ಬಲ್ಲೂರ(ಜೆ) ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ʼನಿಮ್ಮ ಗ್ರಾಮದ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅದಕ್ಕೆ ನೀವು ದೇಣಿಗೆ ಕೊಡಿ, ಆ ಹಣದಿಂದ ನಾವಾದರೂ ನಿಮ್ಮೂರ ಶಾಲೆ ಸುಧಾರಣೆ ಮಾಡ್ತೇವೆʼ ಎಂದು ಹೇಳುತ್ತಾ ದೇಣಿಗೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಗ್ರಾಮದ ಒಂದು ಬಡಾವಣೆಗೆ ತೆರಳಿ ಭಿಕ್ಷೆ ಪಡೆದ ಕಾರ್ಯಕರ್ತರಿಗೆ ಕೆಲವರು ಸ್ಪಂದಿಸಿ ಹಣ ಹಾಕಿದ್ದಾರೆ. ಹೀಗಾಗಿ ಒಟ್ಟು ₹1,036 ಹಣ ಜಮೆಯಾಗಿದೆ ಎಂದು ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ.

ʼಬಲ್ಲೂರ (ಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 1 ರಿಂದ 7ನೇ ತರಗತಿಯವರೆಗೆ ಇದೆ. ಈ ಶಾಲೆಯಲ್ಲಿ ಮೂರು ವರ್ಷಗಳ ಹಿಂದೆ 110 ಮಕ್ಕಳ ಸಂಖ್ಯೆ ಇತ್ತು. ಪ್ರಸಕ್ತ ವರ್ಷ ಆ ಸಂಖ್ಯೆ 19ಕ್ಕೆ ಕುಸಿದಿದೆ. ಶಾಲೆಯಲ್ಲಿ 4 ಕೊಠಡಿಗಳು ಶಿಥಿಲಗೊಂಡಿವೆ. ಇನ್ನು ಮೂಲಭೂತ ಸೌಕರ್ಯ ಕೊರತೆ ಕಾರಣಕ್ಕೆ ಪಾಲಕರು ಈ ಶಾಲೆಗೆ ಮಕ್ಕಳಿಗೆ ಸೇರಿಸಲು ಆಸಕ್ತಿ ತೋರುತ್ತಿಲ್ಲʼ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ತಿಳಿಸಿದ್ದಾರೆ.

ʼಶಾಲಾ ಕೊಠಡಿ, ಮೂಲಸೌಕರ್ಯ ಸೇರಿದಂತೆ ಇತರೆ ಅವ್ಯವಸ್ಥೆ ಸರಿಪಡಿಸಬೇಕೆಂದು ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಕೌಠಾ(ಬಿ) ಗ್ರಾಮ ಪಂಚಾಯತಿ ಪಿಡಿಓ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿಯ ಮುಖ್ಯ ಅಧಿಕಾರಿಗಳಿಗೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಮನವಿ ಪತ್ರ ಸಲ್ಲಿಸುತ್ತಿದ್ದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಸಣ್ಣ ಮಳೆಯಾದರೂ ಶಾಲಾ ಆವರಣದಲ್ಲಿ ನೀರು ಸಂಗ್ರಹಗೊಂಡು ಮಕ್ಕಳ ಓಡಾಟಕ್ಕೆ ತೊಂದರೆಯಾಗುತ್ತದೆʼ ಎಂದು ದೂರಿದ್ದಾರೆ.

WhatsApp Image 2025 10 27 at 9.55.05 PM
ಭಿಕ್ಷೆ ಬೇಡುವ ಅಭಿಯಾನಕ್ಕೆ ಸ್ಪಂದಿಸಿ ಮಹಿಳೆಯೊಬ್ಬರು ಹಣ ದೇಣಿಗೆ ನೀಡಿ ಬೆಂಬಲಿಸಿದರು.

ʼಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಇಂದು ಮೊದಲ ದಿನ ಒಂದು ಬಡಾವಣೆಯಲ್ಲಿ ಭಿಕ್ಷೆ ಬೇಡಿ ಹಣ ಸಂಗ್ರಹ ಮಾಡಲಾಗಿದೆ. ಇದೇ ರೀತಿ ಗ್ರಾಮದ ಎಲ್ಲಾ ಓಣಿಗಳಿಗೂ ತೆರಳಿ ಭಿಕ್ಷೆ ಬೇಡುವ ವಿನೂತನ ಅಭಿಯಾನ ಮುಂದುವರೆಯುತ್ತದೆ. ಆ ಹಣದಿಂದ ಶಾಲೆಯ ಶೌಚಾಲಯ, ಆಟದ ಮೈದಾನ, ಶುದ್ಧ ಕುಡಿಯುವ ನೀರು ಹಾಗೂ ತರಗತಿ ಕೊಠಡಿಗಳಂತಹ ಅಗತ್ಯ ಸೌಕರ್ಯಗಳ ಅಭಿವೃದ್ಧಿ ಮಾಡಿಸಲಾಗುವುದು. ದೇಣಿಗೆ ಹಣದ ಲೆಕ್ಕಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದುʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ದೆಹಲಿಯಲ್ಲಿ ಫೆ.12ರಂದು ಬುದ್ಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ ಆಂದೋಲನ

ಈ ಅಭಿಯಾನದಲ್ಲಿ ಕೆಆರ್‌ಎಸ್ ಜಿಲ್ಲಾ ಉಪಾಧ್ಯಕ್ಷ ಶಿವರಾಜ ಶ್ರೀಮಂಗಲೇ, ಕಾರ್ಯದರ್ಶಿ ವಿಠ್ಠಲರಾವ ಚಟ್ನಳ್ಕರ್ ಹಾಗೂ ಸಂಜುಕುಮಾರ್ ತುಗಾಂವೆ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...