ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

Date:

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌, ಔರಾದ್‌ ತಾಲೂಕಿನ ಕಪ್ಪಿಕೆರೆ ಗ್ರಾಮದ ಬಳಿ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದೆ. ಬಸ್‌ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್‌ ನಿಲ್ಲಿಸಿದ್ದು, ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಸ್‌ನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಔರಾದ್ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ 30 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪವಾನವಿದ್ದು, ತಾಪಮಾನದ ಉಷ್ಣತೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...