ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ ವ್ಯಕ್ತಿ.
ಸಹೋದರ ಸಂಬಂಧಿ ಕಲ್ಲಯ್ಯ ಸ್ವಾಮಿ ಹಾಗೂ ಅವರ ಮಗ ಕೊಲೆ ಆರೋಪಿಗಳು ಎಂದು ತಿಳಿದು ಬಂದಿದೆ.
ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ಮನೆ ಹತ್ತಿರ ಜಗಳ ಮಾಡಿಕೊಂಡ ಸೋದರ ಸಂಬಂಧಿಗಳು ಗುರಯ್ಯ ಸ್ವಾಮಿ ಅವರನ್ನು ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.
ಈ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.