ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

Date:

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.

- Advertisement -

ಸತತ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿ ಇರುವ ಹೊಲಗಳಲ್ಲಿ ಮಳೆ ನೀರು ನಿಂತಿದೆ. ಹೆಸರು, ಉದ್ದು, ತೊಗರಿ ಸೇರಿದಂತೆ ಕಬ್ಬು ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಮುಳುಗುತ್ತಿವೆ. ಬಿತ್ತನೆಯಾದ ಕೆಲ ದಿನಗಳ ವೇಳೆ ಮಳೆ ಬಾರದಕ್ಕೆ ರೈತರು ಎದುರು ನೋಡುತ್ತಿದ್ದರು. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಹಚ್ಚಹಸಿರಿನಿಂದ ನಳನಳಿಸುವ ದೃಶ್ಯ ಒಂದು ಕಡೆಯಾದರೆ, ಬೆಳೆ ಹಾನಿಯ ಚಿಂತೆ ಮತ್ತೊಂದೆಡೆ ರೈತರನ್ನು ಕಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
WhatsApp Image 2025 08 17 at 9.54.27 PM
ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಿರ್ಜಾಪುರ (ಟಿ) ಗ್ರಾಮದಲ್ಲಿ ರೈತರ ಹೊಲದಲ್ಲಿ ನೀರು ಸಂಗ್ರಹಗೊಂಡಿರುವುದು.

ಬಿಡುವು ನೀಡದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಸ್ತಬ್ಧಗೊಂಡಿವೆ. ಹೆಸರು ಮತ್ತು ಉದ್ದು ಬೆಳೆಗಳಿಗೆ ಕೀಟಗಳ ಹಾವಳಿ ನಿಯಂತ್ರಣಕ್ಕೆಂದು ಕೀಟನಾಶಕ ಸಿಂಪಡಿಸುವ ಕೆಲಸ ನಿಂತಿದೆ. ಕೆಲವೆಡೆ ಹೆಸರು ಕಟಾವಿಗೆ ಬಂದರೆ, ಇನ್ನೂ ಹಲವು ಕಡೆ ಕಾಯಿಯಾಗಿರುವ ಹಂತದಲ್ಲಿದೆ.

ಭಾರಿ ಮಳೆ ಬರುತ್ತಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊಲಗಳಲ್ಲಿ ತೇವಾಂಶ ಅಧಿಕಗೊಂಡು ಕೆಸರು ಗದ್ದೆಯಾಗಿ ಮಾರ್ಪಟ್ಟಿವೆ. ನದಿ, ಜಲಾಶಯ, ಕೆರೆ, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ಇದನ್ನೂ ಓದಿ : ಬೀದರ್‌ | ಅಂಗವಿಕಲ ಸಹೋದರಿಯರಿಗೆ ಕೆಎಲ್‌ಇ ಸೊಸೈಟಿಯಿಂದ ʼಸಹಾಯ ಹಸ್ತʼ

‘ಕಾರಂಜಾ ಜಲಾಶಯ ಹರಿವು ಹೆಚ್ಚಾದ ಹಿನ್ನೆಲೆ ನೀರು ಹರಿಸಲಾಗುತ್ತಿದ್ದು, ಇದರಿಂದ ಜೋಳದಾಬಕಾ, ಗೋಧಿ ಹಿಪ್ಪರಗಾ ಸೇರಿದಂತೆ ವಿವಿಧೆಡೆ ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ. ಸರ್ಕಾರ ಶೀಘ್ರ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು’ ಎಂದು ಭಾಲ್ಕಿ ತಾಲೂಕಿನ ರೈತ ಸಿದ್ದು ಜಮಾದರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....