ಬೀದರ್‌ | ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ವಕೀಲ ರಾಕೇಶ್ ಕಿಶೋರ್‌ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ, ಜೀವಾವಧಿ ಶಿಕ್ಷೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಾಮಾಜಿಕ ಪರಿವರ್ತನಾ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಈ ಸಂಬಂಧ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ರಾಷ್ಟ್ರಪತಿ ಹಾಗೂ ಪ್ರಧಾನಿ ಮಂತ್ರಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೇಶದ ನ್ಯಾಯಾಂಗ ವ್ಯವಸ್ಥೆಯ ಉನ್ನತ ಹುದ್ದೆಯಲ್ಲಿರುವ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆತ ಘಟನೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಡೆದ ದಾಳಿಯಾಗಿದೆ. ಇದು ಭಾರತದ ಸಂವಿಧಾನಕ್ಕೆ ಮಾಡಿರುವ ಬಹುದೊಡ್ಡ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 10 08 at 9.07.53 PM

ʼಈ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್‌ನಿಗೆ ಕಠಿಣ ಜೀವವಾದಿ ಶಿಕ್ಷೆ ವಿಧಿಸಬೇಕು. ವಕೀಲನ ಪರವಾನಿಗೆ ರದ್ದುಗೊಳಿಸಿ ದೇಶದ್ರೋಹಿ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಸಂಘದ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಾ.ಅಮೃತರಾವ್‌ ಮೋಳಕೆರೆ, ಜಿಲ್ಲಾಧ್ಯಕ್ಷ ಬಬ್ರುವಾನ ಬೆಳಮಗಿ, ರಾಜ್ಯ ಗೌರವಾಧ್ಯಕ್ಷ ಭೀಮರಾವ್ ಯಸ್ ಮೂಳಕೆರೆ ಪ್ರಮುಖರಾದ ಶಿವಕುಮಾರ್ ಬೌದ್ದೆ, ಸುಮನ್ ಸಿಂದೆ, ಪಂಚಶೀಲ ಹುಡುಗಿ, ರಮಾಬಾಯಿ, ಸುಶೀಲಮ್ಮ, ಸುಲೋಚನ, ವಿಜಯಲಕ್ಷ್ಮಿ, ರೇಣುಕಾ, ಬಬಿತಾ, ಪ್ರವೀಣ ಗುಪ್ತ, ಮಾಣಿಕರಾವ ಪವಾರ್, ಚಂದ್ರಕಾಂತ ಭಾವಿದೊಡ್ಡಿ , ಅಂತಪ್ಪ ಗುಬ್ಬೆ, ಸಂಜು ಕಾಂಬಳೆ, ಚಂದ್ರಕಾಂತ್ ಮಾಳಿಗೆ, ಮುಕೇಶ್ ಸೂರ್ಯವಂಶಿ, ಸಂತೋಷ್ ದೊಡ್ಡಕೆ, ರಾಮಣ್ಣ ಅರಸ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಪ್ರಕರಣ : ಎಸ್ಸಿ, ಎಸ್ಟಿ ನೌಕರರ ಸಮಿತಿ ಖಂಡನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...