ಬೀದರ್‌ | ವಕೀಲರು ಕನ್ನಡದಲ್ಲಿ ವಾದಿಸಲಿ : ವಿನಾಯಕ ವಾನಖಂಡೇ

Date:

ವಕೀಲರು ಕನ್ನಡದಲ್ಲಿ ವಾದ ಮಾಡಬೇಕು. ವಾದಪತ್ರ ಕನ್ನಡದಲ್ಲಿ ಮಂಡಿಸಬೇಕು. ತೀರ್ಪುಗಳು ಕೂಡ ಕನ್ನಡದಲ್ಲಿಯೇ ನೀಡುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿನಾಯಕ ವಾನಖಂಡೇ ನುಡಿದರು.

- Advertisement -

ಔರಾದ್‌ ಪಟ್ಟಣದ ವಕೀಲರ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕಾನೂನು ಸೇವೆಗಳ ಸಮಿತಿ ಹಾಗೂ ತಾಲೂಕು ವಕೀಲರ ಸಂಘ ಸಹಯೋಗದೊಂದಿಗೆ ನಡೆದ ಕನ್ನಡದಲ್ಲಿ ನ್ಯಾಯದ ಬೆಳಕು ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ʼಕನ್ನಡಿಗರೆಲ್ಲರೂ ಕನ್ನಡ ಭಾಷೆಯಲ್ಲಿ ಮಾತನಾಡಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ಗಡಿಭಾಗದಲ್ಲಿ ನಾವೆಲ್ಲರೂ ನಾಡು-ನುಡಿ-ಸಂಸ್ಕೃತಿ ಉಳಿವಿಗಾಗಿ ಶ್ರಮಿಸಬೇಕು ಎಂದು ಅವರು, ಬಳಿಕ ಡಿ.13 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಸಂಬಂಧಿತ ವಿವರಗಳ ಮಾಹಿತಿ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ ಮಾತನಾಡಿ, ʼಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂತಹ ಭವ್ಯ ಇತಿಹಾಸ ಹೊಂದಿರುವ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ನಮ್ಮ ಉಸಿರಾಗಬೇಕು. ಕನ್ನಡದಲ್ಲಿಯೇ ವಾದ ಮಾಡುವ ತೀರ್ಪುಗಳ ನೀಡುವುದರಿಂದ ನಿತ್ಯ ನಿರಂತರ ಕನ್ನಡ ಬಳಕೆಯಾಗಲಿದೆʼ ಎಂದರು.

ಅಮರೇಶ್ವರ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಆರ್.ಪಿ ಮಠ ಮಾತನಾಡಿ, ʼಕನ್ನಡ ನಾಡಿನ ಸಂಸ್ಕೃತಿ ಸಂಸ್ಕಾರದ ಪ್ರತಿಬಿಂಬದಂತಿದ್ದು, ಕರ್ನಾಟಕದಲ್ಲಿ ನ್ಯಾಯದ ಬೆಳಕು ಕನ್ನಡದಲ್ಲಿ ಮೂಡಿ ಬರಬೇಕುʼ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನಸಾಬ ಯಾದವಾಡ ಅವರು ಸಮಾರಂಭ ಉದ್ಘಾಟಿಸಿದರು. ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಪ್ರಾಸ್ತಾವಿಕ ಮಾತನಾಡಿದರು.

WhatsApp Image 2025 11 10 at 6.19.06 PM
ಕನ್ನಡದಲ್ಲಿಯೇ ವ್ಯವಹರಿಸುವ, ವಾದ ಮಾಡುವ ವಕೀಲರಾದ ರಮೇಶ ಅಲಮಾಜೆ, ಪುರುಷೋತ್ತಮ ದೇಸಾಯಿ ಹಾಗೂ ಅಶೋಕ ಹಾಲಕುಡೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಮನುವಾದ ಖಂಡಿಸಿ ದಸಂಸ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ಸಂಜೀವ ಶಟಕಾರ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ ಶಟಕಾರ, ಅಮರಸ್ವಾಮಿ ಸ್ಥಾವರಮಠ, ಅಂಬಾದಾಸ ನಳಗೆ, ನರೇಶಕುಮಾರ್ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೀದರ್ ಜಿಲ್ಲಾ ಪದವೀಧರ ಪ್ರಾಥಮಿಕ (6–8) ಶಾಲಾ ಶಿಕ್ಷಕರ ಸಂಘದ ಜಿಲ್ಲಾ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...