ಬೀದರ್‌ | ನಾಡು-ನುಡಿ ಸಂಸ್ಕೃತಿಯ ಅಭಿಮಾನವಿರಲಿ : ಸಿದ್ರಾಮಪ್ಪ ಮಾಸಿಮಾಡೆ

Date:

ಕನ್ನಡಿಗರೆಲ್ಲರಲ್ಲಿ ನಾಡು-ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಇರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.

- Advertisement -

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ʼಕನ್ನಡ ನಾಡಿನ ಇತಿಹಾಸವನ್ನು ಅರಿಯಬೇಕು. ಆಂಗ್ಲ ಭಾಷೆ ವ್ಯಾಮೋಹದಿಂದ ಹೊರ ಬಂದು, ಹೆಚ್ಚು ಹೆಚ್ಚು ಕನ್ನಡ ಬಳಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಉಪನ್ಯಾಸಕ ಡಾ.ಈಶ್ವರಯ್ಯ ಕೊಡಂಬಲ್ ಮಾತನಾಡಿ, ʼಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಲು ಎಲ್ಲರೂ ಮುಂದಾಗಬೇಕು. ಆಗ ಮಾತ್ರ ಕನ್ನಡ ಬೆಳವಣಿಗೆ ಕಾಣಲು ಸಾಧ್ಯವಿದೆʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ.ಶಂಕರ ಕೆ.ಗಣಗೊಂಡ ಮಾತನಾಡಿ, ʼಕರುನಾಡು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ. ನಾಡು ಹಾಗೂ ನುಡಿಗೆ ತನ್ನದೇ ಆದ ಇತಿಹಾಸ ಇದೆʼ ಎಂದು ತಿಳಿಸಿದರು.

ವಿದ್ಯಾರ್ಥಿ ಸೋಪಾನ್ ಮಾತನಾಡಿದರು. ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಮುಕುಲ್‌ ಜೈನ್ ನೇಮಕ

ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಅಧಿಕಾರಿ ವೀರಭದ್ರಪ್ಪ ಉಪ್ಪಿನ್, ಡಾ.ಚೆನ್ನಕೇಶವ ಮೂರ್ತಿ, ಡಾ. ರಾಜಕುಮಾರ ಅಲ್ಲೂರೆ, ಡಾ. ಸಂಗಶೆಟ್ಟಿ ಶೆಟಕಾರ್,  ಮತ್ತಿತರರು ಇದ್ದರು. ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಎಲಿಶಾ ದೇವದಾಸ ಸ್ವಾಗತಿಸಿದರು. ಶಿವಾನಿ ನಿರೂಪಿಸಿದರು. ಸುಜಾತಾ ವಂದಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...