ಬೀದರ್‌ | ಬಸವತತ್ವಕ್ಕೆ ಬದ್ಧರಾಗಿ ಬದುಕೋಣ : ಶಶಿಕಾಂತ ಶೆಂಬೆಳ್ಳಿ

Date:

ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.

- Advertisement -

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಆಯೋಜಿಸಿದ್ದ ಮಾಸಿಕ ವಚನ ಮಂಟಪ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ʼಇಂದು ಬಸವ ತತ್ವದ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಬಸವಪರ ಸಂಘಟನೆಗಳು ಇನ್ನಷ್ಟು ಸಂಘಟಿತರಾಗಬೇಕು. ಬಸವಾನುಯಾಯಿಗಳು ಜಾಗೃತರಾಗಿರಬೇಕು. ಬಸವತತ್ವದ ಬೆಳವಣಿಗೆಗೆ ಶ್ರಮಿಸುತ್ತಿರುವವರನ್ನು ಎಲ್ಲರೂ ಪ್ರೋತ್ಸಾಹಿಸಬೇಕುʼ ಎಂದು ಹೇಳಿದರು.

ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಸಾನಿಧ್ಯ ವಹಿಸಿ ಮಾತನಾಡಿ, ʼಬಸವಣ್ಣನವರು ಜಗಕ್ಕೆ ಜ್ಯೋತಿಯಾಗಿದ್ದರು. ಅವರ ಅನುಯಾಯಿಗಳು ವೈಯಕ್ತಿಕ ಬದುಕಿಗಾದರೂ ಜ್ಯೋತಿಯಾಗಬೇಕು. ಬಸವಣ್ಣನವರು ಜಗಜ್ಯೋತಿ ಎನಿಸಿಕೊಂಡ ಏಕೈಕ ಮಹಾಪುರುಷರು. ಆ ಪದವಿ ಇನ್ನಾರಿಗೂ ಇಲ್ಲʼ ಎಂದು ಹೇಳಿದರು.

ʼಬಸವರಾಜ ಧನ್ನೂರ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ವಚನಗಳ ಚಿಂತನ- ಮಂಥನಕ್ಕಾಗಿ ಮಾಸಿಕ ವಚನ ಮಂಟಪ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಪ್ರಶಂಸನೀಯʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಅವರು ʼಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾಮನೆಯ ಕಟ್ಟಿದೆʼ ವಿಷಯ ಕುರಿತು ಮಾತನಾಡಿ, ʼಬಸವಣ್ಣನವರು 12ನೇ ಶತಮಾನದಲ್ಲಿ ಮರ್ತ್ಯದ ಮಹಾಮನೆ ಕಟ್ಟಿದ್ದರು. ಆ ಮಹಾಮನೆ ಪ್ರೀತಿ, ಆನಂದ, ಮಾನವೀಯತೆ, ಸಮಾನತೆಯಿಂದ ತುಂಬಿ ತುಳುಕುತ್ತಿತ್ತು. ಅಂತಹ ಮಹಾ ಮನೆ ಕಟ್ಟಿದ್ದಕ್ಕಾಗಿಯೇ ಜನರು ಬಸವಣ್ಣನವರತ್ತ ಆಕರ್ಷಿತರಾದರು. ಜಗತ್ತಿನ ಮೂಲೆ ಮೂಲಗಳಿಂದ ಕಲ್ಯಾಣದೆಡೆಗೆ ಬಂದರುʼ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಸದ್ಯ ಬಸವತತ್ವ ಪ್ರಚಾರ ಹೆಚ್ಚಾಗಿ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬಸವತತ್ವ ಪಸರಿಸಲು ಮಠ-ಮಾನ್ಯಗಳು ಬಹುಭಾಷಾ ತತ್ವ ಪ್ರಚಾರಕರನ್ನು ತಯಾರು ಮಾಡಬೇಕಿದೆ. ಹಿಂದಿ, ಇಂಗ್ಲಿಷ್‍ನಲ್ಲಿ ಬಸವ ತತ್ವದ ಪ್ರವಚನ ಮಾಡುವವರ ಕೊರತೆಯಿದ್ದು, ಅದನ್ನು ನೀಗಿಸಬೇಕಿದೆʼ ಎಂದು ತಿಳಿಸಿದರು.

ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿದರು.ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡ ಹಿರಿಯ ಸಿವಿಲ್ ಎಂಜಿನಿಯರ್ ಹಾವಶೆಟ್ಟಿ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ಆದಿತ್ಯ ಪಾಂಚಾಳ ವಚನ ಗಾಯನ ನಡೆಸಿಕೊಟ್ಟರು.

ಇದನ್ನೂ ಓದಿ : ಬೀದರ್‌ | ರಿಶೈನ್‌ ಸಂಸ್ಥೆಯ ʼಹಸಿವು ಮುಕ್ತ ಸಮಾಜʼ ಕಾರ್ಯಕ್ಕೆ ಸಂಸದ ಸಾಗರ ಖಂಡ್ರೆ ಶ್ಲಾಘನೀಯ

ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಖಜಾಂಚಿ ಬಂಡೆಪ್ಪ ಗಡ್ಡೆ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಗೌರವ ಸಲಹೆಗಾರ ಶರಣಪ್ಪ ಮೈಲೂರಕರ್ ಲಾಡಗೇರಿ ಉಪಸ್ಥಿತರಿದ್ದರು. ಉಚಾ ಮಿರ್ಚೆ ಸ್ವಾಗತಿಸಿದರು. ಸ್ವರೂಪರಾಣಿ ಪಾಟೀಲ ನಿರೂಪಿಸಿದರು. ಉಮೇಶ ಗಾಯಗೊಂಡ ವಂದಿಸಿದರು. ರಾಜಪ್ಪ ಹಜ್ಜರಗಿ ಭಕ್ತಿ ದಾಸೋಹಗೈದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್...