ಬೀದರ್‌ | ಡಿ.7ರಂದು ಉಸ್ಮಾನಾಬಾದ್‌ನಲ್ಲಿ ಲಿಂಗಾಯತ ಮಹಾರ‍್ಯಾಲಿ: ಚನ್ನಬಸವಾನಂದ ಶ್ರೀ

Date:

2025ರ ಡಿಸೆಂಬರ್ 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ಲಿಂಗಾಯತ ಮಹಾರ‍್ಯಾಲಿ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ನುಡಿದರು.

- Advertisement -

ಬಸವಕಲ್ಯಾಣ ನಗರದ ಸಸ್ತಾಪುರ ಬಂಗ್ಲಾ ಸಮೀಪದ ಎಂ.ಎಂ. ಬೇಗ್ ಸಭಾಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ಸಹಯೋಗದಲ್ಲಿ ನಡೆd 4ನೇ ಸ್ವಾಭಿಮಾನಿ ಕಲ್ಯಾಣ ಪರ್ವದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ ಅವರು ಮಾತನಾಡಿ, ʼಗುರು ಭಕ್ತಿಯನ್ನು ಮೈಗೂಡಿಸಿಕೊಂಡು ಶರಣರಿಗೆ ಶರಣಾರ್ಥಿ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸಂಘಟನೆ ಒಡೆಯದಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ರಾಷ್ಟ್ರೀಯ ಬಸವ ದಳ ಇಂದಿಗೂ ಗಟ್ಟಿಯಾಗಿರಲು ಧರ್ಮಶೃದ್ಧೆ, ತತ್ವನಿಷ್ಠೆ ಹಾಗೂ ಲಿಂಗಾನಂದ ಸ್ವಾಮೀಜಿ ಮತ್ತು ಮಾತೆ ಮಹಾದೇವಿ ಅವರ ಕಠಿಣ ಪರಿಶ್ರಮ ಕಾರಣವಾಗಿದೆ. ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತುಕೊಡಿʼ ಎಂದು ತಿಳಿಸಿದರು.

ಚಿಕ್ಕಮುನವಳ್ಳಿಯ ಶಿವಪುತ್ರ ಸ್ವಾಮೀಜಿ ಮಾತನಾಡಿ, ʼದೇವನೊಬ್ಬನೇ ತಂದೆ, ಮನುಷ್ಯರೆಲ್ಲರೂ ಒಂದೇ ಎನ್ನುವ ಶರಣರ ಸಂದೇಶ ಎಲ್ಲಾ ಧರ್ಮಿಯರಿಗೂ ಅನ್ವಯಿಸುತ್ತದೆ. ಏಕದೇವೋಪಾಸಕರಾಗಿ ಬದುಕಬೇಕು. ಬಸವಕಲ್ಯಾಣದ ಮಣ್ಣು ಹಣೆಗೆ ಹಚ್ಚಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಅವಿಮುಕ್ತ ಕ್ಷೇತ್ರ ಬಸವಕಲ್ಯಾಣವನ್ನು ಅಂತರಾಷ್ಟ್ರೀಯ ತಾಣವಾಗಿ ಮಾಡಲು ಎಲ್ಲರೂ ಪ್ರಯತ್ನಿಸಬೇಕುʼ ಎಂದರು.

ಖಾದ್ರಿ ವೆಲ್ಫೇರ್ ಸೊಸೈಟಿ ಧಾರವಾಡದ ಉಪಾಧ್ಯಕ್ಷ ಸೂಫಿ ಸಂತ ಪಿರೆ ತರಿಕತ್ ಅಬ್ದುಲ್ ರಜಾಕ್ ಮಾತನಾಡಿ, ʼಚನ್ನಬಸವಾನಂದ ಸ್ವಾಮೀಜಿ ಕಾರ್ಯ ಶ್ಲಾಘನೀಯ. ಅವರ ಹೋರಾಟಕ್ಕೆ ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ಆರು ನಿರ್ಣಯ ಮಂಡನೆ :

ಡಿ. 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಲಿಂಗಾಯತ ಮಹಾರ‍್ಯಾಲಿ ಆಯೋಜನೆ. 2026ರ ಜನವರಿ ತಿಂಗಳಲ್ಲಿ ಲಿಂಗಾಯತ ಧರ್ಮಕ್ಕೆ ಮಾನ್ಯತೆಗಾಗಿ ʼದಿಲ್ಲಿ ಚಲೋʼ ಆಯೋಜನೆ. ನ್ಯಾ. ಗವಾಯಿ ಮೇಲೆ ಶೂ ಎಸೆದ ವಕೀಲ ಕಿಶೋರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದರೆ ಹೋರಾಟ. ಕನ್ಹೇರಿ ಮಠದ ಸ್ವಾಮಿಗಳು ಬಸವತತ್ವದ ಸ್ವಾಮಿಗಳಿಗೆ ಅವಹೇಳನ ಮಾಡಿದ್ದು ಖಂಡಿಸುತ್ತೇವೆ. ನವೆಂಬರ್ ನಿಂದ ಕರ್ನಾಟಕ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಆರು ರಾಜ್ಯಗಳಲ್ಲಿ ಲಿಂಗಾಯತ ಧರ್ಮ ಜಾಗೃತಿ ಅಭಿಯಾನ ಆರಂಭಿಸುವುದು ಮತ್ತು ನವೆಂಬರ್ 14ಕ್ಕೆ ದುಬೈನಲ್ಲಿ ಚನ್ನಬಸವೇಶ್ವರ ಜಯಂತಿ ಆಚರಣೆ ಮಾಡುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.

IMG 20251012 WA0063

ಕಾರ್ಯಕ್ರಮದಲ್ಲಿ ಕಲ್ಯಾಣಮಹಾಮನೆ ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ, ಮಾತೆ ಶಾಂತಾದೇವಿ, ಭಾಗ್ಯವಂತಿ ಮಾತಾಜಿ ಬೀದರ, ಪ್ರಮುಖರಾದ ಎಸ್.ದಿವಾಕರ್, ಬಸವರಾಜ ಪಾಟೀಲ ಶಿವಪುರ, ಶಶಿಕುಮಾರ ಪಾಟೀಲ, ಬಸವರಾಜ ಪಾಟೀಲ ಚಿಕ್ಕಪೇಟ, ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ ಹಾರೂರಗೇರಿ, ಕೆ.ಶರಣಪ್ರಸಾದ ಬೆಳಗಾವಿ, ಜೈರಾಜಹತ್ತಿ, ಸೇರಿದಂತೆ ಹಲವರಿದ್ದರು. ನಿವೃತ್ತ ಕೃಷಿ ವಿವಿ ಡೀನ್ ಡಾ.ಸುರೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಅಕ್ಕನಾಗಲಾಂಬಿಕಾ ಮಹಿಳಾ ಗಣದ ಶರಣೆಯರಿಂದ ಬಸವ ಪೂಜೆ ನೆರವೇರಿತು. ಶಿವಕುಮಾರ ಪಾರಾ ನಿರೂಪಿಸಿದರು. ಜ್ಯೊತಿ ಕಟಾಳೆ ಸ್ವಾಗತಿಸಿದರು. ದಿಪಾಲಿ ಬಿರಾದಾರ ವಂದಿಸಿದರು.

ಇದನ್ನೂ ಓದಿ : ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...