ಬೀದರ್‌ | ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ-ಸಂಸ್ಕೃತಿ ಮುಖ್ಯ : ಮಹೇಶ ಪಾಟೀಲ್

Date:

ನಾಗರೀಕತೆ ನಿರ್ಮಾಣದಲ್ಲಿ ನಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿ ತಳಪಾಯವಾಗಿರುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ, ಸಾಹಿತ್ಯ ಮುಖ್ಯ ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ನುಡಿದರು.

- Advertisement -

ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ತಾಲೂಕು ಆಡಳಿತ ವತಿಯಿಂದ ಆಯೋಜಿಸಿರುವ ಕರುನಾಡು ಸಾಂಸ್ಕೃತಿಕ ಉತ್ಸವ ನಾಡು ನುಡಿ ಚಿಂತನೆ ಉಪನ್ಯಾಸ ಮಾಲಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ʼಕನ್ನಡ ನಾಡು ನುಡಿಗೆ ಉತ್ತರ ಕರ್ನಾಟಕದ ಕೊಡುಗೆ ಮರೆಯುವಂತಿಲ್ಲ. ಕನ್ನಡದ ಶ್ರೀಮಂತಿಕೆಗೆ ಮಹತ್ವದ ಕಾಣಿಕೆ ಕೊಟ್ಟ ವಚನ ಹಾಗೂ ದಾಸ ಸಾಹಿತ್ಯದ ಹುಟ್ಟು ನಮ್ಮ ನೆಲದಲ್ಲಿಯೇ ಇದೆ. ಭಾಷಾಪ್ರೇಮ, ಭಾಷಾಭಿಮಾನ ಮರೆತರೆ ದ್ವೀತಿಯ ದರ್ಜೆ ನಾಗರೀಕರಂತೆ ಬದುಕಬೇಕಾಗುತ್ತದೆ. ನಮ್ಮ ಗ್ರಾಮ, ನಮ್ಮ ಭಾಷೆಯ ಬಗ್ಗೆ ಅಭಿಮಾನವಿರಲಿʼ ಎಂದರು.

ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಮಾತನಾಡಿ, ʼಕನ್ನಡವೆಂದರೆ ಒಂದು ಭಾಷೆಯಲ್ಲ. ಅದು ಸಮಗ್ರ ಜೀವನ ಮೌಲ್ಯಗಳ ಸಂಗಮವಾಗಿದೆ. ಕನ್ನಡಪರ ಕಾಳಜಿ ಇಟ್ಟುಕೊಂಡು ಗಡಿಯಲ್ಲಿ ಕನ್ನಡದ ಬೆಳವಣಿಗೆಗೆ ವಿಶಿಷ್ಟ ಕಾರ್ಯಕ್ರಮಗಳು ಹಮ್ಮಿಕೊಂಡ ತಾಲೂಕು ಆಡಳಿತದ ಕಾರ್ಯ ಶ್ಲಾಘನೀಯʼ ಎಂದರು.

ಅಮರೇಶ್ವರ ಪದವಿ ಕಾಲೇಜು ಪ್ರಾಚಾರ್ಯೆ ಡಾ. ಪ್ರೇಮಾ ಹೂಗಾರ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಆರ್.ಪಿ ಮಠ ಮಾತನಾಡಿದರು.

ಸಮಾರಂಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ತಹಸೀಲ್ದಾರ್ ಮಹೇಶ ಪಾಟೀಲ್, ಹಲವು ಕನ್ನಡದ ಪ್ರಶ್ನೆಗಳು ಕೇಳಿ ಮಕ್ಕಳಲ್ಲಿನ ಕನ್ನಡ ಜ್ಞಾನದ ಕುರಿತು ಪರಿಶೀಲಿಸಿದರು. ಕನ್ನಡ ನಾಡು ನುಡಿ ವಿಚಾರಗಳು, ಕವಿಗಳು, ಲೇಖಕರು, ವಚನಕಾರರು, ಕೀರ್ತನೆಕಾರರು, ಕರ್ನಾಟಕ ಏಕೀಕರಣ, ರಾಜ್ಯೋತ್ಸವಕ್ಕೆ ಸಂಬಂಧಿಸಿದ ಪ್ರಶ್ನೆ ಕೇಳಿದರು.

ಇದನ್ನೂ ಓದಿ : ಔರಾದ್‌ | ಸೋಯಾ ಬಣವಿಗೆ ಬೆಂಕಿ : ₹1.20 ಲಕ್ಷ ಮೌಲ್ಯದ ಸೋಯಾ ನಾಶ

ಪತ್ರಕರ್ತ ಅಮರಸ್ವಾಮಿ ಸ್ಥಾವರಮಠ, ಕಸಾಪ ಸಂಚಾಲಕ ಅಶೋಕ ಶೆಂಬೆಳ್ಳೆ, ಉಪನ್ಯಾಸಕರಾದ ಉತ್ತಮ ಜಾಧವ, ಶಿವರಾಮ ರಾಠೋಡ, ಉತ್ತಮ ದಂಡೆ, ಸಿಕಂದರ್ ಚವ್ಹಾಣ, ಶೇಖ್ ಮುಜೀಬ್, ಪ್ರೀಯಾ ಮಿಲಿಂದ್ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...