ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Date:

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಏ.22 ಸೋಮವಾರ ಕೊನೆಯ ದಿನವಾಗಿತ್ತು. ಬೀದರ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರಕ್ಕೆ ಸ್ಫರ್ಧಿಸಲು ಒಟ್ಟು 20 ಅಭ್ಯರ್ಥಿಗಳ ನಾಮತ್ರಗಳು ಅಂಗೀಕೃತವಾಗಿದ್ದವು. ಅದರಲ್ಲಿ ಎರಡು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಗೆ ಹಿಂಪಡೆದ ಕಾರಣ ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ಕಣದಲ್ಲಿ ಉಳಿದವರು :

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ನೋಂದಾಯಿತ ಪಕ್ಷದ 8 ಜನ ಅಭ್ಯರ್ಥಿಗಳಾದ ಪುಟರಾಜ್ ಹಣಮಂತ (ಬಿಎಸ್‌ಪಿ) ಭಗವಂತ ಖೂಬಾ (ಬಿಜೆಪಿ), ಸಾಗರ ಈಶ್ವರ ಖಂಡ್ರೆ (ಕಾಂಗ್ರೆಸ್), ಅಂಬಾದಾಸ್ ಸೋಪಾನವರ ಹುಲಸೂರ (ಬಹುಜನ ಭಾರತ ಪಾರ್ಟಿ), ಮಹೇಶ ಗೋರನಾಳಕರ್ (ಆರ್‌ಪಿಐ(ಎ), ಮಹಮ್ಮದ್ ಶಫೀಕ್ ಆರ್ (ಆಲ್ ಇಂಡಿಯಾ ಉಲಮ ಕಾಂಗ್ರೆಸ್), ರಮೇಶ ಜೆ. ಚವ್ಹಾಣ, (ಕೆಆರ್‌ಎಸ್) ರಾಮಚಂದ್ರ ನಾರಾಯಣ (ಕಚೇವು ಕ್ರಾಂತಿಕಾರಿ ಜೈ ಹಿಂದ್ ಸೇನಾ)

10 ಜನ ಪಕ್ಷೇತರ ಅಭ್ಯರ್ಥಿಗಳು :

ಗೋಪಾಲ ಎಂಪಿ ಗಾರಂಪಳ್ಳಿ, ಜೈರಾಮ ಕಾಶಪ್ಪ ಬುಕ್ಕ ವಕೀಲರು, ಡಾ.ಮೋರೆ ದೀನಕರ್, ದಿಲಿಪ್ ಕಾಡವಾದ, ಬಲಭೀಮ ಉಣ್ಣೆ, ರಾಮವಿಲಾಸ ರಾಮುಲಾಲಜಿ ನಾವಂದರ, ರಿಯಾಜ ಅಹ್ಮದ, ರೋಫ ಅಬ್ದುಲ ಗನಿ, ವಸೀಮಮೊದ್ದಿನ್, ಶಿವರಾಜ ಅಡಿವೆಪ್ಪ ಸತವಾರ ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು :

ರಾಷ್ಟ್ರೀಯ ಅಭಿವೃದ್ಧಿ ಪಕ್ಷದ ಬಾಬು ಪಾಷಾ  ಹಾಗೂ ಸ್ವತಂತ್ರ ಅಭ್ಯರ್ಥಿ ಅಬ್ದುಲ ರಜಾಕ್‌ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳಾಗಿದ್ದಾರೆ.

ಮೇ. 7 ರಂದು ಮತದಾನ ನಡೆಯಲ್ಲಿದ್ದು ಜೂನ್ 4ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೇಮಾವತಿ ಲಿಂಕ್ ಕೆನಾಲ್‌ ಯೋಜನೆಗೆ ವಿರೋಧ; ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್

ತುಮಕೂರು ಜಿಲ್ಲೆಗೆ ನೀರು ಒಗಿಸುತ್ತಿರುವ ಹೇಮಾವತಿ ಎಡದಂಡೆ ನಾಲೆಗೆ ಲಿಂಕ್‌ ಕೆನಾಲ್...

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...