ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲಕುಮಾರ್ ಚಂದ್ರಪ್ರಕಾಶ್ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಯಾಗಿರುವ ಸುನೀಲಕುಮಾರ್ ಸದ್ಯ ಕಲಬುರಗಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.
ಬೀದರ್ ನಗರದ ಜೈಲ್ ಕಾಲೊನಿಯ ಎಸ್.ಬಿ.ಪಿ. ನಗರದ ನಿವಾಸ ಹಾಗೂ ಕಲಬುರಗಿಯಲ್ಲಿ ಅವರು ಕೆಲಸ ನಿರ್ವಹಿಸುತ್ತಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನ ಹಾಗೂ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೆ ಮೇಲೆ ದಾಳಿ :
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಮನೆ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕೊಪ್ಪಳ | 102 ಕೆಜಿ ತೂಕದ ಜೋಳದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ 61 ವರ್ಷದ ವ್ಯಕ್ತಿ