ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಆಚರಣೆ ನಡೆಯಲಿದೆ.
ಭಾಲ್ಕಿ ಶ್ರೀಮಠದಲ್ಲಿ ಬುದ್ಧ ಜಯಂತಿ:
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ (ನಾಳೆ) ಸಾಯಂಕಾಲ 5 ಗಂಟೆಗೆ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಗೌತಮ ಬುದ್ಧ ಜಯಂತಿ ಮತ್ತು 487ನೆಯ ಮಾಸಿಕ ಶಿವಾನುಭವಗೋಷ್ಠಿ ಕಾರ್ಯಕ್ರಮ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪುಂಡಲಿಕರಾವ ಅವರನ್ನು ಸನ್ಮಾನಿಸಲಾಗುತ್ತಿದೆ. ಹಿರಿಯ ಸಾಹಿತಿ ಕಾಶಿನಾಥ ಚಲುವಾ ಅನುಭಾವ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ ಸಿಂಧನಕೇರೆ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ವೇಳೆ ಗುರುಪ್ರಸಾದ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ತಾರಾಬಾಯಿ ಶಂಕರೆಪ್ಪ ಕರಕಾಳೆ ಅವರು ಬಸವ ಗುರುವಿನ ಪೂಜೆ ನೆರವೇರಿಸಲಿದ್ದಾರೆ. ವೀರೇಶ ಶೇರಿಕಾರ ಧರ್ಮ ಗ್ರಂಥ ಪಠಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಾಗಲೋಕ ಬೌದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ :
ಬೀದರ್ ನಗರದ ಗಾಂಧಿ ಗಂಜ್‌ನಲ್ಲಿರುವನಾಗಲೋಕ ಬೌದ್ಧ ವಿಹಾರದಲ್ಲಿ ಭಗವಾನ್ ಬುದ್ಧರ 2569ನೇ ಜಯಂತಿ ನಡೆಯಲಿದೆ.
ಭೀಮ್ ಆರ್ಮಿ ಬೀದರ್ ಜಿಲ್ಲಾ ಸಮಿತಿ ವತಿಯಿಂದ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ, 9 ಘಂಟೆಗೆ ಸಾಮೂಹಿಕ ಬುದ್ಧವಂದನೆ ಪೂಜೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1ಗಂಟೆಯಿಂದ ಪ್ರಸಾದ ವಿತರಣೆ ಹಮ್ಮಿಕೊಳ್ಳಲಾಗಿದೆ ಎಂದು ಭೀಮ್ ಆರ್ಮಿ ಜಿಲ್ಲಾ ಗೌರವಾಧ್ಯಕ್ಷ ಘಾಳೇಪ್ಪಾ ಲಾಧಾಕರ ಮನವಿ ಮಾಡಿದ್ದಾರೆ.
ಬೌದ್ಧ ಉಪಾಸಕ, ಉಪಸಕಿಯರು ಹಾಗೂ ಭಗವಾನ್ ಬುದ್ಧರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.