ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಅನೀಲಕುಮಾರ್ ಪಂಚಾಳ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಆಟೋದಲ್ಲಿ ಬರುವಂತೆ ತಿಳಿಸಿ ಪ್ರತಾಪನಗರದಿಂದ ಗುಂಪಾ ಕಡೆಗೆ ಆಕ್ಟಿವಾ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಬಸ್ ಗುದ್ದಿದೆ. ಡಿಕ್ಕಿ ರಭಸಕ್ಕೆ ಸವಾರ ಕೆಳಗೆ ಬಿದ್ದಾಗ ಬಸ್‌ನ ಚಕ್ರ ವ್ಯಕ್ತಿ ಮೇಲೆ ಹರಿದಿದೆ. ಪರಿಣಾಮ ತಲೆ ಛಿದ್ರಗೊಂಡು ಮೃತಪಟ್ಟಿದ್ದಾರೆ.
ಅದೇ ಮಾರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ಆಟೋದಲ್ಲಿ ಬರುತ್ತಿದ್ದ ಮೃತರ ಪತ್ನಿ ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಪತಿಯ ಮೃತದೇಹ ಛಿದ್ರ, ಛಿದ್ರಗೊಂಡ ಬಿದ್ದಿರುವುದು ಕಂಡು ಕುಸಿದು ಬಿದ್ದಿದ್ದರು. ಸ್ಥಳೀಯರು ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸ್ನಾತಕೋತ್ತರ ಪದವೀಧರ ಗ್ರಾಮ ಪಂಚಾಯತ್ ಸದಸ್ಯನಾಗಿ ಆಯ್ಕೆ
ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.