ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಸಮುದಾಯಗಳ ನಿರುದ್ಯೋಗಿ ಯುವಕ ಯುವತಿಯರ ಅಭಿವೃದ್ದಿಗಾಗಿ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ (ಹೈನುಗಾರಿಕೆ) ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋಕ್ರೇಡಿಟ್(ಪ್ರೇರಣಾ) ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು 2025ರ ಸೆ.17ರ ರೊಳಗಾಗಿ ಅನ್‍ಲೈನ್ https://sevasindhu.karnatak.gov.in ದಲ್ಲಿ (ಸೇವಾ ಸಿಂಧು ಪೂರ್ಟಲ್) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.