ಬೀದರ್‌ | ಸುಳ್ಳು ದಾಖಲೆ ಸೃಷ್ಟಿಸಿ ₹9.25 ಕೋಟಿ ತೆರಿಗೆ ವಂಚಿಸಿದ ವ್ಯಕ್ತಿ ಬಂಧನ : ಯಾಸ್ಮಿನ್ ವಾಲಿಕಾರ

Date:

Advertisements

ಕಳೆದ ನಾಲ್ಕು ವರ್ಷಗಳಿಂದ ₹34 ಕೋಟಿ ವ್ಯವಹಾರ ನಡೆಸಿ ವಿವಿಧ ನಾಲ್ಕು ಸಂಸ್ಥೆಗಳ ಮುಖಾಂತರ ಸುಳ್ಳು ದಾಖಲೆ ಸೃಷ್ಟಿಸಿ, ನಕಲಿ ಬಿಲ್‌ ನೀಡಿ 132 ಜನರಿಗೆ ವಂಚಿಸಿ ಸರ್ಕಾರದ ಬೊಕ್ಕಸಕ್ಕೆ ₹9.25 ಕೋಟಿ ತೆರಿಗೆ ಕಟ್ಟದೆ ವಂಚಿಸಿದ ಆರೋಪದ ಮೇರೆಗೆ ಬೀದರ್‌ ಜಿಲ್ಲೆಯ ನಿವಾಸಿ ರಾಹುಲ ಕಿಶನ ಕುಲಕರ್ಣಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆ (ಜಾರಿ) ಇಲಾಖೆಯ ಜಂಟಿ ಆಯುಕ್ತೆ ಯಾಸ್ಮಿನ್ ಬೇಗಂ ಜಿ ವಾಲಿಕಾರ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ʼತೆರಿಗೆ ವಂಚನೆ ಮಾಡಿರುವ ರಾಹುಲ್‌ ಎಂಬಾತನನ್ನು ಕಲಬುರಗಿಯ ಪೂರ್ವ ವಲಯದ ಜಾರಿ ವಿಭಾಗದ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಅಧಿಕಾರಿಗಳು ಹಾಗೂ ತೆಲಂಗಾಣ ರಾಜ್ಯದ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ಸಹಯೋಗದಿಂದ ಹೈದರಾಬಾದ್‌ನಲ್ಲಿ ದಸ್ತಗಿರಿ ಮಾಡಿ ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆʼ ಎಂದು ಮಾಹಿತಿ ನೀಡಿದರು.

ʼಅಪಾದಿತ ತೆರಿಗೆದಾರ ತನ್ನ ಕುಟುಂಬ ಸದಸ್ಯರ ಹಾಗೂ ಸ್ನೇಹಿತರ ಆಧಾರ, ಪ್ಯಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಂಡು, ಜಿಎಸ್‌ಟಿ ನೋಂದಣಿಗಳನ್ನು ಪಡೆದು, ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಾ ಸರಕು ಅಥವಾ ಸೇವೆಗಳನ್ನು ಪೂರೈಕೆ ಮಾಡದೇ ನಕಲಿ ಬಿಲ್ಲುಗಳನ್ನು ನೀಡಿ ಆ ಮೂಲಕ ನಕಲಿ ಹೂಡುವಳಿ ತೆರಿಗೆಯ ಕ್ಲೇಮ್ ಮಾಡಲು ಸಹಕರಿಸುತ್ತಿದ್ದನು. ಈ ಪ್ರಕರಣದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿದ್ದು ಇವರಲ್ಲಿ ಬಹುತೇಕ ಲಾಭಾಂಶಿಗಳು ಕಾಮಗಾರಿ ಗುತ್ತಿಗೆದಾರರಾಗಿದ್ದು, ಇವರು ಪಡೆದಿರುವ ನಕಲಿ ಹೂಡುವಳಿ ತೆರಿಗೆಯ ಬಗ್ಗೆ ತನಿಖೆ ಪ್ರಗತಿಯಲ್ಲಿರುತ್ತದೆ. ನಕಲಿ ಹೂಡುವಳಿ ತೆರಿಗೆ ಪಡೆದಿರುವ ಎಲ್ಲಾ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದರು.

Advertisements

ನಕಲಿ ಹೂಡುವಳಿ ತೆರಿಗೆ ಕ್ಲೇಮ್ ಮಾಡಿದವರಿಂದ ತೆರಿಗೆಯನ್ನು ಬಡ್ಡಿ ಮತ್ತು ದಂಡದ ಸಮೇತ ವಸೂಲಿ ಮಾಡಲಾಗುವುದು.‌ ಈ ರೀತಿ ಸರ್ಕಾರಕ್ಕೆ ವಂಚಿಸಿದ ಆರೋಪ ಸಾಬೀತಾದರೆ ನ್ಯಾಯಾಲಯವು ಆರೋಪಿಗೆ ಕನಿಷ್ಠ 5 ವರ್ಷ ಜೈಲು ಹಾಗೂ ದಂಡ ವಿಧಿಸುವ ಕಾನೂನು ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದು ಅತಿ ದೊಡ್ಡ ತೆರಿಗೆ ವಂಚನೆ ಪ್ರಕರಣವಾಗಿದೆʼ ಎಂದು ಯಾಸ್ಮಿನ್ ವಾಲಿಕಾರ ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಇಲಾಖೆಯ ಬೀದರ್ ಸಹಾಯಕ ಆಯುಕ್ತ ಪರ್ವತಗೌಡ.ಎಸ್, ಇಲಾಖೆಯ ಅಧಿಕಾರಿಗಳಾದ ಖಾಜಾ ಖಲಿಲೂಲ್ಲಾ, ಶಿವಕುಮಾರ ಸ್ವಾಮಿ, ಅಶೋಕ ಶೆಂಬೆಳ್ಳೆ, ಮಹೇಶಕುಮಾರ ಮಾಶೆಟ್ಟೆ ಮತ್ತಿತರರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

ಹಾವೇರಿ | ಬೇಡ್ತಿ-ವರದಾ ನದಿ ಜೋಡಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ: ಸಂಸದ ಬಸವರಾಜ ಬೊಮ್ಮಾಯಿ

"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ...

ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಹಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಬೆಳ್ಳುಳ್ಳಿ ಬೆಳೆದ ರೈತನ ಬದುಕು...

ವಿಜಯಪುರ | ಹೆಣ್ಣನ್ನು ಪೂಜಿಸುವ ನಾಡಿನಲ್ಲಿ ಮಹಿಳೆಯರ ಸುರಕ್ಷತೆ ಬಹುದೊಡ್ಡ ಪ್ರಶ್ನೆಯಾಗಿದೆ: ಪ್ರೊ. ವಿಜಯಾ ಬಿ ಕೋರಿಶೆಟ್ಟಿ

ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು...

Download Eedina App Android / iOS

X