ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

Date:

Advertisements

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕರ ವೇದಿಕೆಯಿಂದ ಬೀದರ್‌ನಲ್ಲಿ ಆಗಸ್ಟ್‌ 7ರ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಮಂಗಳವಾರ ವಿವಿಧ ಸಂಘ- ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಚಿಂತಕರು ಒಗ್ಗೂಡಿ ರೂಪಿಸಿದ ಪ್ರಜ್ಞಾವಂತ ನಾಗರಿಕರ ವೇದಿಕೆಯ ಪೂರ್ವಭಾವಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.

“ಮಣಿಪುರ ಹಿಂಸಾಚಾರದಲ್ಲಿ ಸುಮಾರು 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 300ಕ್ಕೂ ಹೆಚ್ಚು ಚರ್ಚುಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದ 50 ಸಾವಿರಕ್ಕೂ ಅಧಿಕ ಕಟುಂಬಗಳು ಬೀದಿ ಪಾಲಾಗಿವೆ. ಇದಕ್ಕೆಲ್ಲ ಯಾರು ಹೊಣೆಗಾರರು. ಇಬ್ಬರು ಹೆಣ್ಣುಮಕ್ಕಳನ್ನು ನಗ್ನ ಮಾಡಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ” ಎಂದು ಸಂಘಟನಾಕಾರರು ತಿಳಿಸಿದರು.

Advertisements

“ದುರ್ಘಟನೆಗೆ ಸಾಕ್ಷಿಯಾದ ಮಣಿಪುರ ರಾಜ್ಯ ಸರ್ಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಸಲ್ಲಿಸಲಾಗುವುದು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಹಲವು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಣಿಪುರ ಸರ್ಕಾರವನ್ನು ವಜಾಗೊಳಿಸಿ: ಸಂಘಟನೆಗಳ ಆಗ್ರಹ

ಸಭೆಯಲ್ಲಿ ಸಂಘ ಸಂಸ್ಥೆಗಳ ಪ್ರಮುಖರುಗಳಾದ ಅಬ್ದುಲ್ ಖದೀರ್, ಅನಿಲ್ ಕುಮಾರ ಬೆಲ್ದಾರ್, ದರ್ಬಾರ್ ಸಿಂಗ್, ಪೂಜ್ಯ ಭಧಂತಿ ಬೋಧಿ ಪ್ರಜ್ಞಾ, ಮಾರುತಿ ಬೌದ್ಧೆ, ಎಸ್‌ ಎಂ ಜನವಾಡಕರ್, ಭಾರತಿ ವಸ್ತ್ರದ, ವಿನೋದ್ ರತ್ನಾಕರ್, ಮಹೇಶ್ ಗೊರನಾಳಕರ್, ಜಗದೀಶ್ವರ ಬಿರಾದಾರ, ಓಂಪ್ರಕಾಶ್ ರೊಟ್ಟೆ, ಸಾವಿತ್ರಿ ಚಿಕ್ಕಮಠ, ನಿಜಾಮೋದ್ದೀನ್, ರಫೀಕ್ ಅಹ್ಮದ್, ಬಸವರಾಜ ಮಾಳಗೆ, ಪ್ರಕಾಶ್ ರಾವಣ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X