ಬೀದರ್ | ಎಸ್ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

Date:

ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್‌ ನಗರದಲ್ಲಿ ಎಸ್ಐ‌ಆರ್ ವಿರೋಧಿ ಕರ್ನಾಟಕ, ಪ್ರಗತಿಪರ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಡಾ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಸಿ ಮುಖಂಡರು ಮಾತನಾಡಿ ಎಸ್ಐಆರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಬಳಿಕ ಪ್ರತಿಭಟನಾ ಮೆರವಣಿಗೆ ಮುಖಾಂತರ ಬೀದರ್ ಸಹಾಯಕ ಆಯುಕ್ತ ಕಚೇರಿಗೆ ತೆರಳಿ ಮುಖ್ಯಮಂತ್ರಿ ಹಾಗೂ ರಾಜ್ಯ ಚುನಾವಣಾಧಿಕಾರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಸಹಾಯಕ ಆಯುಕ್ತ ಪ್ರಕಾಶ್ ಕುದುರೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮುಖಂಡರು ಮಾತನಾಡಿ, “ಎಸ್‌ಐಆ‌ರ್ ಎಂಬುದು ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಹಾಗೂ ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯಾಗಿದೆ. ಸಾಮಾನ್ಯ ಮತದಾರರ ಹಕ್ಕುಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ಜನರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕುಗಳನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ. ಸರ್ಕಾರ ಹಾಗೂ ಚುನಾವಣಾ ಆಯೋಗವು ಜನರಲ್ಲಿ ಗೊಂದಲ ಸೃಷ್ಟಿಸುವ ಬದಲು ಪಾರದರ್ಶಕ ಮತ್ತು ಸಂವಿಧಾನಬದ್ಧ ವಿಧಾನಗಳನ್ನು ಅನುಸರಿಸಬೇಕು” ಎಂದು ಆಗ್ರಹಿಸಿದರು.

d8422d41 2960 42f9 ba02 14a8fc734939

“ಸಂವಿಧಾನ, ಪ್ರಜಾತಂತ್ರ ವಿರೋಧಿಯಾದ, ಜನ ವಿರೋಧಿಯಾದ ಎಸ್‌ಐಆ‌ರ್ ರದ್ದಾಗಬೇಕು. ಸಂವಿಧಾನಬದ್ಧವಾದ ಹಾಗೂ ಜನಸ್ನೇಹಿಯಾದ ಐಆರ್‌ ಜಾರಿಗೆ ತರಬೇಕು. ʼಲಾಜಿಕಲ್‌ ಡಿಸ್ಕ್ರಿಪೆನ್ಸಿʼ ಎನ್ನುವ ಅವೈಜ್ಞಾನಿಕ, ಅಪಾರದರ್ಶಕ ವಿಧಾನವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಳವಡಿಸಬಾರದು. ಜನವಿರೋಧಿ ಎಸ್‌ಐಆ‌ರ್ ವಿರುದ್ಧ ಸರ್ಕಾರವು ದಿಟ್ಟ ನಿಲುವು ತಾಳಬೇಕು” ಎಂಬ ಬೇಡಿಕೆ ಸೇರಿ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿದರು.

ರಾಜ್ಯದ ಮತದಾರರ ಹಕ್ಕೊತ್ತಾಯಗಳು:

ಸದ್ಯದ ಸ್ವರೂಪದ SIR ಅನ್ನು ಒಪ್ಪುವುದಿಲ್ಲ ಎಂದು ಕರ್ನಾಟಕ ಸರ್ಕಾರ ಘೋಷಿಸಬೇಕು. ಸ್ಪೆಲ್ಲಿಂಗ್, ದಿನಾಂಕ ಇಂತಹ ಕ್ಷುಲ್ಲಕ ವಿಚಾರಗಳ ಮುಂದಿರಿಸಿ ಮತದಾನದ ಹಕ್ಕಿನಿಂದ ಯಾರನ್ನೇ ಹೊರಗಿಡುವುದು ಅಕ್ಷಮ್ಯ ಅಪರಾಧ. ಕರಡು ಪಟ್ಟಿ ತಯಾರಾದ ನಂತರ ಯಾರ ಮತವನ್ನಾದರೂ ಸುಲಭವಾಗಿ ಹುಡುಕಬಹುದಾದ ರೀತಿಯಲ್ಲಿ, ಪಾರದರ್ಶಕತೆ ಇರುವ ರೀತಿಯಲ್ಲಿ ಅದನ್ನು ‘ಕಂಪ್ಯೂಟ‌ರ್ ರೀಡಬಲ್ ಫಾರ್ಮ್ಯಾಟಿ’ನಲ್ಲಿ ನೀಡಬೇಕು.

ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ಆ ಭಾಗದ ಮತದಾರರ ಕರಡು ಪಟ್ಟಿಯನ್ನು ಬಹಿರಂಗವಾಗಿ ಪ್ರಕಟಿಸಿ, ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಬೇಕು.

ಈ ಪ್ರಕ್ರಿಯೆಯನ್ನು ಗಡಿಬಿಡಿಯಲ್ಲಿ ನಡೆಸದೆ. ಕನಿಷ್ಟ ಒಂದು ವರ್ಷಗಳ ಅವಧಿ ನಿಗದಿ ಮಾಡಬೇಕು. ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಅಲೆಮಾರಿಗಳು, ಆದಿವಾಸಿಗಳು, ದಲಿತರು, ಬಡ ಅಲ್ಪಸಂಖ್ಯಾತರು ಮುಂತಾದ ದಾಖಲೆಗಳ ಗಂಭೀರ ಸಮಸ್ಯೆ ಎದುರಿಸುತ್ತಿರುವ ಜನ ವರ್ಗಗಳು ಪ್ರಜಾತಾಂತ್ರಿಕ ಪ್ರಕ್ರಿಯೆಯಿಂದ ವಂಚಿತರಾಗದಂತೆ ಒಳಗೊಳ್ಳಲು ಅವರಿಗಾಗಿ ವಿಶೇಷ ಸರಳ ಕ್ರಮಗಳನ್ನು ರೂಪಿಸಬೇಕು.

‘ಚೆಕ್ ಮೇಟ್ ಪಟ್ಟಿ ತಯಾರಿಸಬೇಕು. ವೈಜ್ಞಾನಿಕ ಹಾಗೂ ಜನಸ್ನೇಹಿ ವಿಧಾನವನ್ನು ಬಳಸಿ ರಾಜ್ಯ ಚುನಾವಣಾ ಆಯೋಗದ ಮೂಲಕ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗುವ ರಾಜ್ಯ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು. ವಿಶೇಷ ಗ್ರಾಮ ಸಭೆಗಳಲ್ಲಿ ಪರಿಶೀಲನೆಗೊಂಡು ಧೃಡಗೊಂಡ ಮತದಾರರಿಗೆ ಅವರ ದಾಖಲೆಗಳ ಸಮೇತ ಸ್ಮಾರ್ಟ್ ಕಾರ್ಡ್ ನೀಡಬೇಕು. ದಾಖಲೆ ಇಲ್ಲದವರಿಗೆ ‘ವಾಸ ಧೃಡೀಕರಣ ಪತ್ರ’ ವನ್ನು ತಕ್ಷಣವೇ ವಿತರಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಪ್ರದೇಶಗಳಲ್ಲಿ ‘ಮತದಾರರ ನೆರವು ಕೇಂದ್ರ’ಗಳನ್ನು ತೆರೆಯಬೇಕು.

ಎಸ್ಐಆರ್ ವಿರುದ್ದದ ನಮ್ಮ ಹೋರಾಟ ಆರಂಭವಾಗಿದೆ. ನಮ್ಮ ಈ ಮೇಲಿನ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

17a32e21 4018 48c0 839d 71bfd79f846b 1

ಪ್ರತಿಭಟನೆಯಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷ, ಆಮ್ ಆದ್ಮಿ ಪಕ್ಷ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಆರ್‌ಪಿಐ, ಸಿಪಿಐ, ಕರ್ನಾಟಕ ರಾಜ್ಯ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜಾಗೃತ ಕರ್ನಾಟಕ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ವಿಶ್ವಕ್ರಾಂತಿ ದಿವ್ಯಪೀಠ, ಜಮಾಅತ್ ಇಸ್ಲಾಮಿ ಹಿಂದ್, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘ, ಅಲೆಮಾರಿ ಸಮುದಾಯ, ಕರ್ನಾಟಕ ಸೋಶಿಯಲ್ ಡೆವಲಪ್ಮೆಂಟ್ ಅಸೋಸಿಯೇಷನ್,ಅಖಿಲ ಭಾರತ ಲಿಂಗಾಯತ ಮಹಾಸಭೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

ಬಸವರಾಜ ಜಾಬಶೆಟ್ಟಿ, ಮಾರುತಿ ಬೌದ್ಧೆ, ಓಂಪ್ರಕಾಶ್ ರೊಟ್ಟೆ, ಮಹೇಶ್ ಗೊರನಾಳಕರ್, ಬಾಬುರಾವ್ ಹೊನ್ನಾ, ನಿಜಾಮೋದ್ದೀನ್, ಅಮೃತರಾವ್ ಚಿಮಕೋಡೆ, ಜಗದೀಶ್ವರ ಬಿರಾದಾರ, ಗೋಪಾಲ್ ಸಿಂಗ್ ಠಾಕೂರ್, ವಿನಯಕುಮಾರ್ ಮಾಳಗೆ, ಸಿದ್ದಪ್ಪ ಫುಲಾರಿ, ಹಣಮಂತ ಮಟ್ಟೆ, ಮಹ್ಮದ್ ಆಶಿಪೋದ್ದೀನ್, ರಜಿಯಾ ಬಳಬಟ್ಟಿ, ಮುಬಸೀರ್ ಸಿಂಧೆ, ಅಸ್ಮಾ ಸುಲ್ತಾನಾ, ಭೀಮ್ ಸಂಗಮ, ವಿಜಯಕುಮಾರ, ಫಿರಾಸತ್ ಅಲಿ, ಮೌಲಾನಾ ಅಬ್ದುಲ್ ಗಫ್ಫಾರ್, ದುರ್ಗಪ್ಪ, ರಾಮಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...