ಬೀದರ್ | ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅಗತ್ಯ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

Advertisements

ಸುದ್ದಿ ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ಮುದ್ರಣ ಮಾಧ್ಯಮಗಳು ಇಂದಿಗೂ ಆ ವಿಶ್ವಾಸ ಉಳಿಸಿಕೊಂಡಿವೆ. ಅದೇ ರೀತಿ ಪತ್ರಕರ್ತರು, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು, ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟರು.

ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ, ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

“ಪ್ರಜಾಪ್ರಭುತ್ವದ ಉಳಿವಿಗೆ ಭದ್ರವಾದ ಬುನಾದಿ ಹಾಕುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂಬುದು ಅತಿಶಯೋಕ್ತಿಯ ಮಾತಲ್ಲ. ಜನಾಭಿಪ್ರಾಯ ರೂಪಿಸುವ ಮಹತ್ವದ ಜವಾಬ್ದಾರಿಯನ್ನು ಮಾಧ್ಯಮಗಳು ಮಾಡುತ್ತಿವೆ. ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುತ್ತಿರುವ ಜನರಿರುವ ಸಮಾಜದಲ್ಲಿ ಮಾಧ್ಯಮಗಳ ಪಾತ್ರ, ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಹೇಳಿದರು.

Advertisements

“ಸತ್ಯಾನ್ವೇಷಣೆ ಮಾಡಿ ಜನರ ಮುಂದೆ ಸುದ್ದಿ ತಂದರೆ, ಜನಕ್ಕೆ ಸಮಾಜಕ್ಕೆ ಒಳಿತಾಗುತ್ತದೆ. ಭಾರತೀಯರಲ್ಲಿ ಭಾವನಾತ್ಮಕತೆ ಇದೆ. ಭಾವನಾತ್ಮಕ ವಿಚಾರ ಕೆರಳಿಸಿ ಲಾಭ ಮಾಡುವವರ ಕಾಲ ಇದಾಗಿದ್ದು, ಮಾಧ್ಯಮದವರು ಹೆಚ್ಚು ಜಾಗೃತರಾಗಿರಬೇಕು” ಎಂದರು.

5 ಸಾವಿರ ಕೋಟಿ ರೂ. ಸದ್ಬಳಕೆ

ಗಡಿ ಭಾಗದ ಬೀದರ್ ಜಿಲ್ಲೆಯ ಇಂದಿನ ಯವಜನರು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ. ಉತ್ತಮ ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್‌ಗಳು, ರಾಜಕಾರಣಿಗಳು, ಶಿಕ್ಷಕರು, ಪತ್ರಕರ್ತರು ಎಲ್ಲರೂ ಇದ್ದಾರೆ. ಹಾಗೆಯೇ ಜಿಲ್ಲೆಯ ತಲಾದಾಯ ಹೆಚ್ಚಳವಾಗಬೇಕು. ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳು ಹೆಚ್ಚಿನ ಪ್ರಗತಿ ಹೊಂದಬೇಕು. ಸರ್ಕಾರ ಈ ಎಲ್ಲದರ ಬಗ್ಗೆ ಗಮನ ಹರಿಸುತ್ತದೆ. ಈ ಬಾರಿ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂ. ನೀಡಿದ್ದು, ಹಿಂದಿನ ವರ್ಷ ಖರ್ಚಾಗದೆ ಉಳಿದ 2 ಸಾವಿರ ಕೋಟಿ ರೂ. ಇದೆ. ಕೆಕೆಆರ್‌ಡಿಬಿ ವತಿಯಿಂದ ಕ್ರಿಯಾಯೋಜನೆ ರೂಪಿಸಿ ಮುಂದಿನ ಮಾರ್ಚ್ 31ರೊಳಗೆ ಈ ಹಣದ ಸದ್ಬಳಕೆ ಮಾಡಲಾಗುವುದು” ಎಂದು ಹೇಳಿದರು.

ಪಕ್ಷಾತೀತ ಅಭಿವೃದ್ಧಿ

“ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬೇಕು. ಬಳಿಕ ಪಕ್ಷಾತೀತವಾಗಿ, ಶಾಸಕರು, ಸಚಿವರು, ಸಂಸದರು ಎಲ್ಲರೂ ಒಟ್ಟಾಗಿ ಜಿಲ್ಲೆಯ ಪ್ರಗತಿಗೆ ಶ್ರಮಿಸಬೇಕು” ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

“371 ಜೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗಬೇಕಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 30 ಸಾವಿರದಿಂದ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕೇವಲ ವಿಶ್ವವಿದ್ಯಾಲಯ ಘೋಷಿಸಿ, 2 ಕೋಟಿ ರೂ. ಅನುದಾನ ನೀಡಿದರೆ ಸಾಕಾಗುವುದಿಲ್ಲ. ಈ ಬಗ್ಗೆ ಶೀಘ್ರವೇ ಪರಿಶೀಲಿಸಲಾಗುವುದು” ಎಂದು ಹೇಳಿದರು.

ಪತ್ರಕರ್ತರಿಗೆ ವಿಮೆ, ಬಸ್ ಪಾಸ್

“ಮಾಧ್ಯಮದ ಮಿತ್ರರಲ್ಲಿ ಶೇ.80ರಷ್ಟು ಮಂದಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಆರೋಗ್ಯ ವಿಮೆ ಇವರಿಗೆ ಅಗತ್ಯವಾಗಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡುವ ಬೇಡಿಕೆ ಮತ್ತು ಪತ್ರಕರ್ತರಿಗೆ ಗ್ರಾಮೀಣ ಸಾರಿಗೆಯಲ್ಲಿ ಪ್ರಯಾಣಿಸಲು ಬಸ್ ಪಾಸ್ ನೀಡುವ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡಲಾಗುವುದು” ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಹಿರಿಯ ಪತ್ರಕರ್ತರುಗಳಾದ ತಿ ತಾ ಶರ್ಮಾ, ಮೊಹರೆ ಹಣಮಂತರಾವ್, ಖಾದ್ರಿ ಶಾಮಣ್ಣ, ಶ್ಯಾಮರಾವ್, ಪಾಟೀಲ ಪುಟ್ಟಪ್ಪ ಮತ್ತು ಬೀದರ್ ಜಿಲ್ಲೆಯ ಹಿರಿಯ ಪತ್ರಕರ್ತರಾದ, ಶಿವಶರಣಪ್ಪ ವಾಲಿ, ದಮನ್ ಪಟೇಲ್, ವಿಶ್ವನಾಥ್ ಪಾಟೀಲ್, ಖಾಜಿ ಅರ್ಷದ್ ಅಲಿ ಮೊದಲಾದವರು ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆ ಸ್ಮರಿಸಿದ ಸಚಿವರು, ಹಿರಿಯ ಆದರ್ಶ ಪಾಲಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X