ಬೀದರ್‌ | ಲಿಂಗಾಯತ ಮಠಾಧೀಶರ ವಿರುದ್ಧ ಹಗುರ ಹೇಳಿಕೆ : ಕನ್ನೇರಿ ಸ್ವಾಮೀಜಿ ಗಡಿಪಾರಿಗೆ ಒತ್ತಾಯ

Date:

ಬಸವ ಸಂಸ್ಕೃತಿ ಅಭಿಯಾನ ಮತ್ತು ಅಭಿಯಾನದ ನೇತೃತ್ವ ವಹಿಸಿದ ಲಿಂಗಾಯತ ಮಠಾಧೀಶರ ಬಗ್ಗೆ ಹಗುರವಾಗಿ ಮಾತನಾಡಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಈ ಕುರಿತು ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಸೋಮವಾರ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಮೇಶ ಚಿದ್ರಿ ನೇತೃತ್ವದಲ್ಲಿ ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼರಾಜ್ಯದಾದ್ಯಂತ ಸೆ.1ರಿಂದ ಅ.3ರವರೆಗೆ ನಡೆದ ಬಸವ  ಸಂಸ್ಕೃತಿ ಅಭಿಯಾನ ಅಭೂತಪೂರ್ವ ಯಶಸ್ಸು ಕಂಡಿದೆ. ಇನ್ನು ಸಮಾರೋಪ ಸಮಾರಂಭದಲ್ಲಿ ನೂರಾರು ಮಠಾಧೀಶರು, ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಬಸವ ಭಕ್ತರು ಪಾಲ್ಗೊಂಡು ಬಸವ ಸಂಸ್ಕೃತಿ ಅಭಿಯಾನ ಐತಿಹಾಸಿಕವಾಗಿ ಯಶಸ್ವಿಗೊಳಿಸಿದ್ದಾರೆ. ಆದರೆ ಇದರ ಯಶಸ್ಸು ಸಹಿಸದ ಕನ್ನೇರಿ ಮಠದ ಪೀಠಾಧಿಪತಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಇಲ್ಲ ಸಲ್ಲದ ಹೇಳಿಕೆ ನೀಡಿ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕ ಇಲ್ಲದಂತೆ ವರ್ತಿಸಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನೇರಿ ಮಠ ಬಸವಾದಿ ಶರಣರ ಪರಂಪರೆ ಹೊಂದಿರುವ ಪೀಠವಾಗಿದೆ. ಆದರೆ, ಬಸವ ಸಂಸ್ಕೃತಿ ಮತ್ತು ಮಠಾಧೀಶರ ವಿರುದ್ಧು ಕೀಳು ಮಟ್ಟದ ಶಬ್ದಗಳನ್ನು ಬಳಸಿ ಕನ್ನೇರಿ ಮಠಕ್ಕೆ ಅಗೌರವ ತಂದು ಕೊಟ್ಟಿದ್ದಾರೆ. ಇಂತಹ ನೀಚ ಮನಸ್ಥಿತಿ ಹೊಂದಿರುವ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪೀಠದ ಮೇಲೆ ಕುಳಿತುಕೊಳ್ಳಲು ಯಾವುದೇ ನೈತಿಕಲ್ಲ. ಸಮಾಜದಲ್ಲಿ ವಿಷಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ಸ್ವಾಮೀಜಿ ವಿರುದ್ಧ ರಾಜ್ಯ ಸರಕಾರ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕುʼಈ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟ ಬೇಂದ್ರೆ : ಅನಂತ ಕೃಷ್ಣ ದೇಶಪಾಂಡೆ

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್, ತಾಲೂಕು ಅಧ್ಯಕ್ಷ ಬಸವರಾಜ ಕಾರಬಾರಿ, ಯುವ ಘಟಕದ ಜಿಲ್ಲಾಧ್ಯಕ್ಷ ಸುದೀಪ ತುಗಾವೆ, ಪ್ರಮುಖರಾದ ಜಗದೀಶ ಪಾಟೀಲ್, ಭದ್ರಯ್ಯ ಸ್ವಾಮಿ, ಸಂಗಮೇಶ ಮಾರ್ಗೆ, ಬಾಲಾಜಿ ಮೇಗೆ, ಸಂಗಮೇಶ ಗುಮ್ಮೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...