ಬೀದರ್‌ | ಅಂಗನವಾಡಿ ಕೇಂದ್ರ ಬಲವರ್ಧನೆಗೆ ʼಮಿಂಚಿನ ಸಂಚಾರʼ ಕಾರ್ಯಕ್ರಮ : ಶ್ರೀಧರ್

Date:

ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲೆಯ ಎಲ್ಲ ಮೇಲ್ವಿಚಾರಕರು ಭೇಟಿ ನೀಡಿ ಕೇಂದ್ರಗಳಲ್ಲಿ ಲೋಪದೋಷಗಳನ್ನು ಪಟ್ಟಿ ಮಾಡಿ ಇಲಾಖೆಗೆ ವರದಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಂ. ಹೇಳಿದರು.

- Advertisement -

ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಂಗನವಾಡಿ ಕೇಂದ್ರಗಳ ಪುನಶ್ಚೇತನಗೊಳಿಸುವ ಬಗ್ಗೆ ಔರಾದ್‌ ತಾಲೂಕಿನ ಸಂತಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸಮಾರೋಪಾದಿ ಭೇಟಿ ಹಾಗೂ ಮಿಂಚಿನ ಸಂಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಆಹಾರ ಪದಾರ್ಥಗಳು, ಮಕ್ಕಳ ದಾಖಲಾತಿ, ಗರ್ಭಿಣಿಯರ ಮಾಹಿತಿ ಸೇರಿದಂತೆ ನಾನಾ ವರದಿಗಳನ್ನು ಪಡೆದುಕೊಂಡು ಸಿಬ್ಬಂದಿಗಳಿಗೆ ಹೆಚ್ಚಿನ ಸಲಹೆ ಸೂಚನೆಗಳನ್ನು ನೀಡಲು ಈ ಭೇಟಿ ಹಮ್ಮಿಕೊಳ್ಳಲಾಗಿದೆʼ ಎಂದರು.

ʼಸಂತಪುರ ಶಿಶು ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಔರಾದ್- ಕಮಲನಗರ ತಾಲೂಕಿನ 180ಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳಿಗೆ ಅಧಿಕಾರಿಗಳ ತಂಡದವರು ಭೇಟಿ ನೀಡಿ, ಮಿಂಚಿನ ಸಂಚಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮವಾಗಿದೆ. ಈ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ಯಶಸ್ವಿಗೊಂಡು ರಾಜ್ಯ ವ್ಯಾಪ್ತಿಗೆ ಪ್ರಚಾರವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕುʼ ಎಂದು ಸೂಚನೆ ನೀಡಿದರು.

ʼಅಂಗನವಾಡಿ ಕೇಂದ್ರಗಳಲ್ಲಿ ಪೋಷಣ ಟ್ರ‍್ಯಾಕರ್‌ನ ಬಳಕೆ, ದಾಖಲಾತಿಗಳ ನಿರ್ವಹಣೆ, ಶಾಲಾ ಪೂರ್ವ ಶಿಕ್ಷಣದ ಅನುಷ್ಠಾನ, ಪೂರಕ ಪೌಷ್ಠಿಕ ಆಹಾರ ಸದ್ಬಳಕೆ ಹಾಗೂ ವಿವಿಧ ಯೋಜನೆಯ ಸೌಲಭ್ಯಕ್ಕೆ ಅರ್ಹರಾಗಿರುವವರ ಮನೆ ಭೇಟಿ ಸೇರಿದಂತೆ ಇತರೆ ಯೋಜನೆಗಳು ಅನುಷ್ಠಾನವನ್ನು ಪರಿಶೀಲನೆ ಮಾಡಿ ಸುಧಾರಣೆಗೆ ಸೂಕ್ತ ಸಲಹೆಗಳನ್ನು ನೀಡಿದರು.

ಇದನ್ನೂ ಓದಿ : ಬೀದರ್‌ | ಸೈಬರ್ ವಂಚನೆ : 3 ವರ್ಷದಲ್ಲಿ ₹8.18 ಕೋಟಿ ದೋಖಾ

ಔರಾದ್‌ ತಾಲೂಕು ಸಿಡಿಪಿಒ ಇಮಾಲಪ್ಪ ಡಿಕೆ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರೂಪಾ ಎಸ್. ಕೋಟೆಗೌಡರ್, ಭಾಲ್ಕಿ ಸಿಡಿಪಿಒ ಎಂ.ಡಿ ಅಬ್ದೂಲ್ ಖಲೀಲ್ ಸೇರಿದಂತೆ ಪ್ರಮುಖರಾದ ಗೌತಮ್ ಸಿಂಧೆ, ಶಾರದಾ, ಶಿವಪ್ರಕಾಶ ಹಿರೇಮಠ, ಮಂಜೂರ್ ಖಾನ್ ,ಯೋಗೇಶ್ವರಿ, ರಾಜೇಶ್ರೀ, ಸುರೇಖಾ, ಶೋಭಾ, ವಿಜಯಲಕ್ಷ್ಮಿ, ನಾಗಮ್ಮ, ಆರತಿ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...