ಬೀದರ್‌ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ : ಓಂಪ್ರಕಾಶ ರೊಟ್ಟೆ ಆರೋಪ

Date:

ಬೀದರ್‌ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ ತಿಪ್ಪಣ್ಣ ಸಿರ್ಸಿಗೆ ಮತ್ತು ರವೀಂದ್ರ ರತ್ನಾಕರ್‌ ಅವರ ಮೇಲೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಎಸಗಿದ ಆರೋಪಗಳಿವೆ. ಆ ಇಬ್ಬರೂ ಅಧಿಕಾರಿಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಕ್ಷಿಸುತ್ತಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ʼ2023ರ ಜುಲೈ 14ರಂದು ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯರಾಗಿದ್ದ ಅರವಿಂದಕುಮಾರ್ ಅರಳಿ ವಿಧಾನ ಪರಿಷತ್‌ನಲ್ಲಿ ದುರುಪಯೋಗದ ವಿಷಯ ಪ್ರಸ್ತಾಪಿಸಿದ್ದರು. ಆಗ ಹಿರಿಯ ಅಧಿಕಾರಿಗಳ ತಂಡವನ್ನು ವಿಚಾರಣೆಗೆ ರಚಿಸಿದ್ದ ಸರ್ಕಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು. ಆದರೂ, ಕ್ರಮವಾಗದ್ದರಿಂದ ಹುಮ್ನಾಬಾದ್ ಶಾಸಕ ಸಿದ್ದು ಪಾಟೀಲ 2024ರ ಏಪ್ರಿಲ್ 6ರಂದು ವಿಧಾನಸಭೆಯಲ್ಲಿ ಮತ್ತೆ ಈ ವಿಷಯ ಪ್ರಸ್ತಾಪಿಸಿದ್ದರು. ವಿಚಾರಣೆ ನಂತರ ಇಬ್ಬರೂ ಅಧಿಕಾರಿಗಳ ವಿರುದ್ಧ ದೋಷಾರೋಪ ಸಲ್ಲಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಬೆಂಗಳೂರಿನ ವಿಧಾನಸೌಧದಲ್ಲಿ 2025ರ ಮೇ 14ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಅವರು, ಇಬ್ಬರು ಅಧಿಕಾರಿಗಳ ಅಮಾನತು ಕಡತವನ್ನು ಅನುಮೋದನೆಗಾಗಿ ಹೆಬ್ಬಾಳಕರ ಅವರಿಗೆ ಕಳುಹಿಸಿದ್ದಾರೆ. ಆದರೆ, ಈವರೆಗೂ ಸಚಿವರು ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಅಧಿಕಾರಿಗಳು ಬೇರೆ ಬೇರೆ ಸ್ಥಳಗಳಲ್ಲಿ ಈಗಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆʼ ಎಂದು ಆಪಾದಿಸಿದರು.

ದುರುಪಯೋಗದ ಆರೋಪ ಹೊತ್ತಿರುವ ಅಧಿಕಾರಿಗಳನ್ನು ರಕ್ಷಿಸುತ್ತಿರುವುದರಿಂದ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಿದ್ದರಾಮಯ್ಯ ತಮ್ಮ ಸಂಪುಟದಿಂದ ಕೈಬಿಡಬೇಕು. ಇಲ್ಲಿದಿದ್ದರೆ ವಿಧಾನಸಭೆಗೆ ಮುತ್ತಿಗೆ ಸರ್ಕಾರದ ಭ್ರಷ್ಟಾಚಾರದ ನಡೆಯನ್ನು ರಾಜ್ಯದ ಜನತೆ ಎದುರು ತೆರೆದಿಡಲಾಗುವುದುʼ ಎಂದು ಓಂಪ್ರಕಾಶ ರೊಟ್ಟೆ ಆಗ್ರಹಿಸಿದರು.

ಇದನ್ನೂ ಓದಿ : ಬೀದರ್‌ | ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...