ಬೀದರ್|‌ ಸಚಿವ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆ : ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

Date:

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ/ಬಿಟಿ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ವ್ಯಕ್ತಿಗೆ ಕಠಿಣ ಕಾನೂನು ಶಿಕ್ಷೆ ವಿಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ಆಗ್ರಹಿಸಿವೆ.

- Advertisement -

ಈ ಕುರಿತು ಬೀದರ್‌ನಲ್ಲಿ ಗುರುವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ʼಸಚಿವ ಪ್ರಿಯಾಂಕ್ ಖರ್ಗೆ ಅವರು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಆರ್‌ಎಸ್‌ಎಸ್ ಸಂಘಟನೆಯ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆದರೆ, ಅದಕ್ಕೆ ಪ್ರತಿಕ್ರಿಯೆಯಾಗಿ ಕೆಲವರು ಅವರಿಗಗೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾರೆ. ಇಂತಹ ಕೃತ್ಯಗಳು ಸಮಾಜದಲ್ಲಿ ಅಸಹಿಷ್ಣುತೆ ಮತ್ತು ಹಿಂಸಾತ್ಮಕ ಮನೋಭಾವ ಬೆಳೆಸುವ ಅಪಾಯವಿದೆʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ʼನಮ್ಮ ಹೋರಾಟ ವ್ಯಕ್ತಿಗಳ ವಿರುದ್ಧವಲ್ಲ, ಆದರೆ ಸಮಾಜದಲ್ಲಿ ವಿಷಮ ಹಾಗೂ ಕೊಳಕು ಮನಸ್ಥಿತಿಯನ್ನು ಹರಡುವ ಸಂಘಟನೆಯ ವಿರುದ್ಧವಾಗಿದೆ. ಮುಗ್ದ ಯುವಕರು ಮತ್ತು ಮಕ್ಕಳು ಇಂತಹ ಕಳಂಕಿತ ಚಟುವಟಿಕೆಗಳಿಗೆ ಬಲಿಯಾಗದಂತೆ ತಡೆಯಲು ನಾವು ಹೋರಾಡುತ್ತಿದ್ದೇವೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಖಾಸಗಿ ಸಂಸ್ಥೆಗಳಿಂದ ಅನಧಿಕೃತವಾಗಿ ಸರ್ಕಾರಿ ಸ್ಥಳ ಉಪಯೋಗ – ಕಾನೂನು ಏನು ಹೇಳುತ್ತದೆ?

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ, ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪಕುಮಾರ್ ವರ್ಮಾ, ಜಿಲ್ಲಾ ಅಧ್ಯಕ್ಷ ರಾಹುಲ್‌ ಭಂಗೂರೆ, ಮಹಾನಗರ ಪಾಲಿಕೆ ಸದಸ್ಯ ಸೂರ್ಯಕಾಂತ ಸಾಧುರೆ, ಮಹಾನಾಯಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಗೋಪಾಲ ದೊಡ್ಡಿ, ಕ್ರಾಂತಿಕಾರಿ ಜನತಾ ಸಂಘದ ಪವನ ಮಿಠಾರೆ, ಎನ್.ಎಸ್.ಯು.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌತಮ ಮುತ್ತಂಗಿಕರ್, ಕರ್ನಾಟಕ ರಕ್ಷಣಾ ವೇದಿಕೆ (ಗಜಸೇನಾ) ಉಪಾಧ್ಯಕ್ಷ ಸುನೀಲ ಚಂದಾ, ಯುವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಅಶೋಕ ಭಾವಿದೊಡ್ಡೆ, ದಲಿತ ಸಂಘರ್ಷ ಸಮಿತಿಯ (ಪರಿವರ್ತನ ವಾದ) ಜಿಲ್ಲಾ ಅಧ್ಯಕ್ಷ ಜಗನ್ನಾಥ ಹೊನ್ನಾ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...