ಬೀದರ್‌ | ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ರಹೀಂ ಖಾನ್‌ ಭೇಟಿ

Date:

ಪೌರಾಡಳಿತ ಮತ್ತು ಹಜ್ ಖಾತೆ ಸಚಿವರೂ ಆದ ಬೀದರ್‌ ಶಾಸಕ ರಹೀಂ ಖಾನ್ ಅವರು ಶನಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

- Advertisement -

ಬೀದರ್‌ ತಾಲೂಕಿನ ಜನವಾಡ, ಹಿಪ್ಪಳಗಾಂವ, ಚಾಂಬೋಳ ಗ್ರಾಮ ಮತ್ತು ಸೇತುವೆ, ಕನಳ್ಳಿ, ಶ್ರೀಮಂಡಲ, ಕಂಗಟಿ, ಬಸಂತಪುರ , ಚಿಮಕೋಡ, ಪತೇಪೂರ, ಖಾಜಾಪೂರ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿ, ಸ್ಥಳೀಯ ರೈತರಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಬಳಿಕ ಮಾತನಾಡಿದ ಸಚಿವರು, ʼಭಾರಿ ಮಳೆಯಿಂದಾಗಿ ರೈತರು ಬೆಳೆದ ಹೆಸರು, ಉದ್ದು ಸೋಯಾಬೀನ್, ತೊಗರಿ ಸೇರಿದಂತೆ ನಾನಾ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಮಳೆಯಿಂದ ಸೇತುವೆ, ಮನೆ, ರಸ್ತೆಗಳಿಗೆ ಹಾನಿಯಾಗಿದೆ. ಹಾನಿಯ ಬಗ್ಗೆ ವರದಿ ಸಲ್ಲಿಸಿ ಶೀಘ್ರದಲ್ಲಿ ರೈತರಿಗೆ ಪರಿಹಾರ ನೀಡಲು ಅಂತರ ಇಲಾಖಾ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬೆಳೆ  ಹಾನಿ ಮತ್ತು ಮನೆ ಹಾನಿಗೆ ಎಸ್‍ಡಿಆರ್‌ಎಫ್ ಮತ್ತು ಎನ್‍ಡಿಆರ್‌ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿಗಳಿಗೆ ಕ್ಷೇತ್ರದ ಪರಿಸ್ಥಿತಿ ಬಗ್ಗೆ ತಿಳಿಸಲಾಗಿದ್ದು, ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆʼ ಎಂದು ಭರವಸೆ ನೀಡಿದ ಸಚಿವರು, ʼಸಾರ್ವಜನಿಕರು ನದಿ, ಕೆರೆಗಳಿಂದ ದೂರ ಇರಬೇಕು, ಯಾವುದೇ ಅಪಾಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಬೀದರ ತಹಸಿಲ್ದಾರ್ ರವೀಂದ್ರ ಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...