ಬೀದರ್‌ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಅವ್ಯವಹಾರ ; ತನಿಖೆಗೆ ಆಗ್ರಹ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಎಲ್ಲ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಧಾರ್‌ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ಅನ್ವಯ ಆಹಾರ ಸಾಮಾಗ್ರಿ ವಿತರಿಸುವಂತೆ ಇಲಾಖೆ ಆಯುಕ್ತರ ಆದೇಶವಿದೆ. ಆದರೆ ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಲ್ಲಿ ಸರ್ಕಾರದ ಆದೇಶ ಪಾಲಿಸದೆ ಮ್ಯಾನುವಲ್ ಹಾಜರಾತಿ ಪಡೆದು ವಿದ್ಯಾರ್ಥಿಗಳಿಗೆ ಆಹಾರ ಸಾಮಾಗ್ರಿ ವಿತರಿಸಿ ಬೋಗಸ್ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡುತ್ತಿದ್ದಾರೆʼ ಎಂದು ಪ್ರಜಾಪ್ರಭುತ್ವ‌ ಸಂರಕ್ಷಣಾ ಸಮಿತಿ ಸಂಸ್ಥಾಪಕ ಗಗನ್‌ ಫುಲೆ ಆರೋಪಿಸಿದ್ದಾರೆ.

- Advertisement -

ಮಂಗಳವಾರ ಬೀದರ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಹಾಸ್ಟೆಲ್‍ಗಳಲ್ಲಿ ಅಳವಡಿಸಲಾಗಿರುವ ಬಯೋಮೆಟ್ರಿಕ್ ಯಂತ್ರಗಳ ಮೂಲಕ ಒಬ್ಬ ವಿದ್ಯಾರ್ಥಿ ಮೂಲಕವೇ ಐದು ಮಂದಿಯ ಹಾಜರಾತಿ ದಾಖಲು ಮಾಡಲಾಗುತ್ತಿರುವ ಆರೋಪವೂ ಇದೆ. ಹಾಗಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಿ ಜಾರಿಗೊಳಿಸಿದರೆ ಮಾತ್ರ ಅನುದಾನ ದುರ್ಬಳಕೆ ತಡೆಯಬಹುದಾಗಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ʼಹಿಂದಳಿದ ವರ್ಗಗಳ ಇಲಾಖೆಯಡಿ ಬರುವ ಮೆಟ್ರಿಕ್‌ ಪೂರ್ವ ಹಾಸ್ಟೆಲ್‍ಗಳಲ್ಲಿ ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೆ ಮಾಸಿಕ ತಲಾ ₹1,750 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗೆ ತಲಾ, ₹1,850 ಹಾಗೂ ಊಟ, ಉಪಾಹಾರ ವೆಚ್ಚ ಭರಿಸಲಾಗುತ್ತಿದೆ. 10 ತಿಂಗಳ ಅವಧಿಗೆ ಉಚಿತ ವಸತಿ, ಆಹಾರ, ಸಮವಸ್ತ್ರ ಹಾಗೂ ಇತರೆ ಸೌಲಭ್ಯಗಳಿಗೂ ಹಣ ಒದಗಿಸುತ್ತಿದೆ. ಆದರೆ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಆಧಿಕಾರಿಗಳು 2022ರ ಜುಲೈ 26ರಿಂದ ಮಾರ್ಚ್ 2025ರವರೆಗೆ ಸರ್ಕಾರದ ಆದೇಶ ಪಾಲಿಸದೆ ವಿದ್ಯಾರ್ಥಿಗಳಿಗೆ ಮ್ಯಾನುವಲ್‌ ಹಾಜರಾತಿ ಪ್ರಕಾರ ಆಹಾರ ವೆಚ್ಚದ ಬಿಲ್ ಪಾವತಿಸುತ್ತಿರುವುದು ಕಂಡು ಬಂದಿದೆʼ ಎಂದು ದೂರಿದರು.

ʼಹಿಂದುಳಿದ ವರ್ಗಗಳ ಇಲಾಖೆ ಆದೇಶಗಳನ್ನು ಗಾಳಿಗೆ ತೂರಿ ಇಲಾಖೆ ಅಧಿಕಾರಿಗಳು ಅಕ್ರಮ ವ್ಯವಹಾರ ಎಸಗಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದಾರೆ. ಹೀಗೆ ಜಿಲ್ಲೆಯ ಎಲ್ಲ ತಾಲ್ಲೂಕಿನ ಹಾಸ್ಟೆಲ್‌ಗಳಲ್ಲಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ತೆಗೆದುಕೊಳ್ಳದೆ ಕಣ್ಮುಚ್ಚಿ ಕುಳಿತ್ತಿದೆ. ಕೂಡಲೇ ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೊಲೀಸ್‌ ಸಿಬ್ಬಂದಿ ಸ್ವಂತ ವಾಹನಗಳ ಮೇಲೆ ‘ಪೊಲೀಸ್’​ ಎಂದು ಬರೆಸುವಂತಿಲ್ಲ: ಪರಮೇಶ್ವರ್

ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಪ್ರಮುಖರಾದ ವೆಂಕಟರಾವ್‌ ಮೋರೆ, ವಿನೋದ ರತ್ನಾಕರ್‌, ಜೈವರ್ಧನ್‌ ಫುಲೆ, ಕಲ್ಲಪ್ಪ ಹಾಲಹಿಪ್ಪರ್ಗಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...