ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

Date:

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷಿಸದೆ ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ರಚಿಸಿರುವ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಮಕ್ಕಳ ಅಪಹರಣ, ನಾಪತ್ತೆ, ಸ್ವಯಂ ಪ್ರೇರಿತವಾಗಿ ಹಾಗೂ ಪ್ರೀತಿಸಿ ಮನೆ ಬಿಟ್ಟು ಹೋದ 18 ವರ್ಷದೊಳಗಿನ ಮಕ್ಕಳು ಕಾಣೆಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. 2018 ರಿಂದ 2025ರ ಜುಲೈವರೆಗೆ ಬಾಕಿ ಉಳಿದಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸಬೇಕುʼ ಎಂದು ತಿಳಿಸಿದರು.

ʼಕಾಣೆಯಾದ ಮಕ್ಕಳ ಪೋಷಕರು, ಸಂಬಂಧಿಕರು ಹಾಗೂ ಸ್ನೇಹಿತರರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದು ಅವರನ್ನು ಟ್ರ‍್ಯಾಕ್ ಮಾಡಬೇಕು. ಮೊಬೈಲ್‌ನಿಂದ ಕೊನೆಯ ಕರೆಯ ಲೊಕೇಶನ್ ಟ್ರ‍್ಯಾಕಿಂಗ್ ನಡೆಸಿ ದೇಶದ ಯಾವುದೇ ಸ್ಥಳದಲ್ಲಿದ್ದರೂ ಕರೆತಂದು ಪೋಷಕರಿಗೆ ಒಪ್ಪಿಸಬೇಕು. ಮಕ್ಕಳ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ 30 ದಿನಗಳಲ್ಲಿ ಪ್ರಕರಣ ಪೂರ್ಣಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ನಿರ್ಲಕ್ಷಿಸಿದರೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗುವುದುʼ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ, ʼಶಾಲಾ-ಕಾಲೇಜು ಓದುತ್ತಿರುವ ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಕಾಣೆಯಾದ ಮಕ್ಕಳ ಸ್ನೇಹಿತರನ್ನು ಭೇಟಿ ಮಾಡಿ ಅವರಿಗೆ ತಿಳಿದಿರುವ ಮಾಹಿತಿಗಳನ್ನು ಪಡೆಯಬೇಕು ಮತ್ತು ಪೋಷಕರಿಂದ ಮೂಲ ಮಾಹಿತಿಗಳನ್ನು ಪಡೆದು ಆದಷ್ಟು ಬೇಗ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಬೇಕುʼ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಮಾತನಾಡಿ, ʼಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ, ವೇಶ್ಯವಾಟಿಕೆಯಂತಹ ಸಮಾಜದ ಕೆಟ್ಟ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಂದ ಮಕ್ಕಳನ್ನು ರಕ್ಷಿಸಿ ಅವರ ಬಾಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆʼ ಎಂದರು.

ಇದನ್ನೂ ಓದಿ : ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಶಾಲಾ ಶಿಕ್ಷಣ ಉಪ ನಿರ್ದೇಶಕ ಸಲಿಂ ಪಾಷಾ, ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷ ಶಿವಪ್ಪ, ಬಾಲ ನ್ಯಾಯಾಲಯ ಸದಸ್ಯೆ ಧನ್ವಂತರಿ ಸೇರಿದಂತೆ ಎನ್‌ಜಿಓಗಳ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಕಾಣೆಯಾದ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...