ಬೀದರ್ | ಕಾರಂಜಾ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶಾಸಕ ಶೈಲೇಂದ್ರ ಒತ್ತಾಯ

Date:

ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಕಾರಂಜಾ ಹಿನ್ನೀರಿನ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡಲಾಗಿಲ್ಲ. ಅವರ ಸಮಸ್ಯೆ ಬಗೆಹಿರಿಸಲ್ಲ. ಬಜೆಟ್‌ನಲ್ಲಿ ಅವರ ಸಮಸ್ಯೆಗಳ ಕುರಿತು ಉಲ್ಲೇಖವಿಲ್ಲ. ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿನ ನಡೆಯುತ್ತಿರುವ ವಿಧಾನಸಭೆ ಅಧವೇಶನದಲ್ಲಿ ಬೀದರ್ ಜಿಲ್ಲೆಯ ನಾನಾ ಸಮಸ್ಯೆಗಳ ಕುರಿತು ಅವರು ಮಾತನಾಡಿದರು. “ಕಾಂಗ್ರೆಸ್ ತಮ್ಮ ಗ್ಯಾರಂಟಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದೆ. ಅದು ಸ್ವಾಗತಾರ್ಹ. ಆದರೆ, ಸಾರಿಗೆ ಇಲಾಖೆಯಿಂದ ಯಾವುದೇ ತಯಾರಿ ಆಗದಿರುವ ಕಾರಣ, ವಿಧ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯದಲ್ಲಿ ಬಸ್‌ಗಳ ಕೊರತೆಯಿದೆ. ಇರುವ ಬಸ್‌ಗಳ ರೂಟ್ ಕಡಿಮೆ ಮಾಡಲಾಗಿದೆ. ದಿನನಿತ್ಯ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಬಾಗಿಲಿನಲ್ಲಿ ನೇತಾಡುತ್ತ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅನಾಹುತ ಸಂಭವಿಸುವ ಮುನ್ನ ಸಾರಿಗೆ ಸಚಿವರು ಪರಿಶೀಲನೆ ನಡೆಸಿ ಬಸ್‌ಗಳನ್ನು ಹೆಚ್ಚಿಸಬೇಕು” ಎಂದರು.

“ಬೀದರ್ ಜಿಲ್ಲೆಯ ಬಿಎಸ್‌ಎಸ್‌ಕೆ ಕಾರ್ಖಾನೆಯಲ್ಲಿ ಸುಮಾರು 184 ಎಕರೆಯಲ್ಲಿರುವ ಕಾರ್ಖಾನೆಯು ದಿನನಿತ್ಯ 3 ರಿಂದ 3.5 ಲಕ್ಷ ಕಬ್ಬು ನುರಿಸುವ ಸಾಮರ್ಥ ಹೊಂದಿತ್ತು. ಆದರೆ, ಸ್ಥಗಿತಗೊಂಡಿದೆ. ಲೀಸ್-ಗುತ್ತಿಗೆ ನೀಡುವುದು, ನೀರಾವರಿ ಹೆಚ್ಚಿನ ಆದ್ಯತೆ ಕುರಿತು ಬಜೆಟ್‌ನಲ್ಲಿ ಸೇರಿಸಲಾಗಿಲ್ಲ. ಕಾರಂಜಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರ ಸಮಸ್ಯೆ ಪರಿಹಾರ ಕುರಿತು ಪ್ರಸ್ತಾಪವಿಲ್ಲ. ಹೊಸದಾಗಿ ರಚನೆಯಾದ ತಾಲೂಕಗಳಿಗೆ ಯಾವುದೆ ಸೌಲಭ್ಯ ಕಲ್ಪಿಸಿಲ್ಲ” ಎಂದು ಆರೋಪಿಸಿದ್ದಾರೆ.

“ಬೀದರ್ ಜಿಲ್ಲೆಯಲ್ಲಿದ್ದ ಕೃಷಿ ಡಿಪ್ಲೋಮಾ ಕೋರ್ಸ್‌ಅನ್ನು ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಸ್ಥಗಿತಗೊಳಿಸಲಾಗಿದೆ. ಬೀದರ್‌ನಲ್ಲಿರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಪದವಿ ಕಾಲೇಜು ಕಟ್ಟಡ ನಿರ್ಮಾಣ ಮಾಡಿ ನಾಲ್ಕು ವರ್ಷವಾಯಿತು. ಆದರೆ, ಅದಕ್ಕೆ ಸೂಕ್ತ ಸೌಲಭ್ಯ ಇನ್ನೂ ದೊರೆಯುತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...