ಬೀದರ್‌ | ಗುಡುಗು ಸಹಿತ ಸಾಧಾರಣ ಮಳೆ; ಶನಿವಾರವೂ ಮಳೆಯಾಗುವ ಸೂಚನೆ ನೀಡಿದ ಹವಾಮಾನ ಇಲಾಖೆ

Date:

ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.

- Advertisement -

ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದೆ. ಇದರಿಂದ ತಾಪಮಾನದಲ್ಲಿ ಭಾರೀ ಇಳಿಕೆಯಾಗಿದ್ದು, ವಾತಾವರಣ ಸಂಪೂರ್ಣ ತಂಪಾಗಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಿಸಿಲಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ಸಾಧಾರಣ ಪ್ರಮಾಣದಲ್ಲಿ ಬಿಸಿಲು ಇತ್ತು. ಮಧ್ಯಾಹ್ನದ ಬಳಿಕ ದಟ್ಟ ಕಾರ್ಮೋಡ ಕವಿದು ಸುರಿದ ಮಳೆಗೆ ಇಳೆ ತಂಪಾಗಿದೆ.

ಈ ಸುದ್ದಿ ಓದಿದ್ದೀರಾ? ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

ತಾಲೂಕಿನ ಅಮಲಾಪೂರ, ಚಿಟ್ಟಾ, ಘೋಡಂಪಳ್ಳಿ, ಯಾಕತಪೂರ, ಯದಲಾಪೂರ, ಶಹಾಪೂರ, ಗುನ್ನಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಜಿಲ್ಲೆಯ ಬಸವಕಲ್ಯಾಣ, ಚಿಟಗುಪ್ಪ, ಹುಮನಾಬಾದ್‌, ಹುಲಸೂರಿನಲ್ಲಿ ಗುರುವಾರ ತಡರಾತ್ರಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವರ್ಷದ ಮೊದಲ ಮಳೆ ಪ್ರವೇಶಿಸಿದೆ. ಮಾರ್ಚ್‌ 22ರ ಶನಿವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...