ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರ, ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಬೆಂಗಳೂರು, ಭಾರತ ಸರ್ಕಾರ ಮತ್ತು ಬೀದರ್ ಜಿಲ್ಲಾ ಕೃಷಿ ಇಲಾಖೆಗಳ ಸಹಯೋಗದೊಂದಿಗೆ ಪ್ರಸ್ತುತ 2025ನೇ ಮುಂಗಾರು ಬೀಜ ವಿತರಣೆ ಮತ್ತು ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲೆಯ ಮರಕುಂದ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಡಾ. ಜೀವನ್ ಹಾಗೂ ಆರ್‌ಸಿಐಪಿಎಂಸಿಯ ಜಂಟಿ ನಿರ್ದೇಶಕ ಡಾ. ಅಲಂಗೀರ್ ಸಿದ್ದೀಕಿರವರು ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿದರು. ಬೀಜೋಪಚಾರದ ಪ್ರಯೋಜನಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಆರ್‌ಸಿಐಪಿಎಂಸಿಯ ಸಿಬ್ಬಂದಿಗಳಾದ ಡಾ. ಜಯಸಿಂಹ, ಡಾ. ವಿಕಾಸ್ ಚವ್ಹಾಣ್ ಮತ್ತು ದಿವ್ಯ ಬೀಜೋಪಚರ ಕುರಿತು ಪ್ರಾತ್ಯಕ್ಷಿಕೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ಡಾ.ಆರತಿ ಪಾಟೀಲ್ ಹಾಗೂ ಕೃಷಿ ಅಧಿಕಾರಿಗಳು ರೈತರೊಂದಿಗೆ ಸಂವಾದ ನಡೆಸಿ ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಇದನ್ನೂ ಓದಿ: ಬೀದರ್ | ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ : ಸಚಿವ ರಹೀಂ ಖಾನ್