ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀದರ್ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಬುಧವಾರ (ಜು.2) ರಾತ್ರಿ 9 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ.
ಘೋಡಂಪಳ್ಳಿ ಗ್ರಾಮದ ಲಕ್ಷ್ಮಿಕಾಂತ್ ಜೋಶಿ ಅಲಿಯಾಸ್ ಕಾಂತು (45) ಮತ್ತು ತಾಯಿ ಶಾರದಾಬಾಯಿ (86) ಹಾಗೂ ಅದೇ ಗ್ರಾಮದ ಇನ್ನೋರ್ವ ಯುವಕ ರವಿ (18) ಮೃತರು. ಒಂದೇ ದಿನ ತಾಯಿ-ಮಗನ ಸಾವು ಇಡೀ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಬಾವಿಯೊಂದಕ್ಕೆ ಬಿದ್ದಿದೆ. ಚಾಲಕ ಸೇರಿ ವಾಹನದಲ್ಲಿದ್ದ ಒಟ್ಟು 7 ಜನರ ಪೈಕಿ ಇಬ್ಬರು ಮೃತಪಟ್ಟಿದ್ದು, ಗಾಯಗೊಂಡ ಐದು ಜನರನ್ನು ಬೀದರ್ ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೀದರ್ ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಅಪಘಾತ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ