ಹುಮನಾಬಾದ ತಾಲ್ಲೂಕಿನ ಧುಮ್ಮನಸೂರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ನಿರ್ಮಾಣ ಮಾಡಿರುವ ನಮ್ಮೂರ ಸಮುದಾಯ ಗ್ರಂಥಾಲಯವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ಅವರು ಗುರುವಾರ ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಗಿರೀಶ ಬದೋಲೆ ಅವರು ಮಾತನಾಡಿ, ʼಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ ಹಾಗೂ ಸರ್ವ ಸದಸ್ಯರ ಸಹಕಾರದೊಂದಿಗೆ ನಿರ್ಮಿಸಲಾದ ಸಮುದಾಯ ಗ್ರಂಥಾಲಯ ಇತರೆ ಪಂಚಾಯಿತಿಗಳಿಗೆ ಮಾದರಿಯಾಗಿದೆ. ಗ್ರಂಥಾಲಯದಲ್ಲಿರುವ ದಿನಪತ್ರಿಕೆ, ಪುಸ್ತಕಗಳನ್ನು ಓದುವ ಮೂಲಕ ಮಕ್ಕಳು, ಗ್ರಾಮಸ್ಥರು ಸದುಪಯೋಗಪಡಿದುಕೊಳ್ಳಬೇಕುʼ ಎಂದು ತಿಳಿಸಿದರು.
ಬಳಿಕ ನರೇಗಾ ಯೋಜನೆಯಡಿಯಲ್ಲಿ ಕೆರೆ ಅಭಿವೃದ್ಧಿಪಡಿಸಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ನರೇಗಾ ಯೋಜನೆಯ ಬಗ್ಗೆ ಕೂಲಿ ಕಾರ್ಮಿಕರ ಜೊತೆ ಕೆಲವು ಸಮಯ ಚರ್ಚೆ ನಡೆಸಿ ಯೋಜನೆ ಬಗ್ಗೆ ಮಾಹಿತಿ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ದಿಪೀಕಾ ನಾಯ್ಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪಾ ಭೋತಳೆ, ಗ್ರಾಮ ಪಂಚಾಯತ ಪಿಡಿಓ ಮಲ್ಲಿರ್ಕಾಜುನ್ ಸಗರ್, ತಾಲೂಕು ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.