ಬೀದರ್‌ | ʼನನ್ನವ್ವನ ಜನಪದ ಸಿರಿʼ ಕೃತಿ ಬಿಡುಗಡೆ

Date:

ಜನಪದ ಸಂಸ್ಕೃತಿ ಪೋಷಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ʼನನ್ನವ್ವನ ಜನಪದ ಸಿರಿʼ ಕೃತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಲಬುರಗಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಅಭಿಪ್ರಾಯಪಟ್ಟರು.

- Advertisement -

ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ಈಚೆಗೆ ಬಿಡುಗಡೆಯಾದ ‌ʼನನ್ನವ್ವನ ಜನಪದ ಸಿರಿʼ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ʼಆಧುನಿಕತೆ ತಂತ್ರಜ್ಞಾನದ ಪ್ರಸ್ತುತ ಕಾಲದಲ್ಲಿ ಜನಪದ ಸೊಗಡು ತುಂಬಿಕೊಂಡ ಈ ಕೃತಿ ತುಂಬ ವಿಶೇಷವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ʼಈ ಕೃತಿಯಲ್ಲಿ ಬೀದರ್ ಭಾಷೆ ಹಾಗೂ ಹಾಡಿನ ಧಾಟಿಗೆ ಪೂರಕವಾದ ವ್ಯಾಕರಣಾಂಶ ಅನಾವರಣಗೊಳಿಸಿರುವ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತನ್ನ ತಾಯಿ ತುಳಸಮ್ಮ ಸಂಗ್ರಾಮ ಸಿಂಧೆ ಅವರಲ್ಲಿನ ಹಾಡುಗಳಿಗೆ ಅಕ್ಷರ ರೂಪ ನೀಡಿರುವುದು ಒಂದು ಸಂಶೋಧನಾ ಕೃತಿಗಿಂತಲೂ ಮಿಗಿಲಾಗಿದೆʼ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಅಮರವಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼನಶಿಸುತ್ತಿರುವ ಜನಪದ ಸಂಸ್ಕೃತಿಯನ್ನು ನಾವುಗಳು ಪೋಷಿಸುವ ಅಗತ್ಯವಿದೆ. ಜನಪದದಲ್ಲಿ ಜೀವನ ಮೌಲ್ಯಗಳು, ನೈತಿಕ ಪಾಠಗಳಿವೆ, ಅವು ಬದುಕಿಗೆ ದಾರಿದೀಪವಾಗುವ ಮಹತ್ವದ ಸಂದೇಶಗಳಿವೆʼ ಎಂದು ನುಡಿದರು.

ʼತುಳಸಮ್ಮ ಸಿಂಧೆ ಅವರಲ್ಲಿನ ನಮ್ಮ ನೆಲಮೂಲ ಸಂಸ್ಕೃತಿ ನಶಿಸದಂತೆ ತನ್ನ ಜನಪದ ತಾಯಿಯನ್ನು ಜೀವಂತವಾಗಿಡುವ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಕಾರ್ಯ ಅನುಪಮವಾಗಿದೆ. ಯುವ ಸಮೂಹ ಮೊಬೈಲ್‌ಗೆ ಬಲಿಯಾಗದೇ ಇಂತಹ ಕೃತಿಗಳ ಅಧ್ಯಯನ ನಡೆಸಬೇಕು ಮತ್ತು ಗ್ರಾಮೀಣ ಪ್ರದೇಶದಲ್ಲಿನ ಅನೇಕ ತಾಯಿಯಂದಿರಲ್ಲಿನ ಜನಪದ ಹಾಡುಗಳ ಸಂಗ್ರಹಕ್ಕೆ ಮುಂದಾಗಬೇಕುʼ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಹಂಸಕವಿ ಅವರು ನಾಗೂರ್ (ಬಿ) ಗ್ರಾಮದ ಹಿನ್ನೆಲೆ, ವಿಶೇಷತೆ ಮತ್ತು ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಕುರಿತು ಪರಿಚಯ ಮಾಡಿಕೊಟ್ಟರು.

ಇದೇ ಸಂದರ್ಭದಲ್ಲಿ ಜನಪದ ಹಾಡುಗಾರ್ತಿ ತುಳಸಮ್ಮ ಸಿಂಧೆ ಹಾಗೂ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಗ್ರಾಮಸ್ಥರು, ಸಾಹಿತ್ಯಾಸಕ್ತರಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

ಸಮಾರಂಭದಲ್ಲಿ ಶಿಕ್ಷಕರಾದ ಕಲ್ಲಪ್ಪ ಪಾಂಚಾಳ ಹಾಗೂ ಸವಿತಾ ಕರಸೋನೆ ಅವರ ಮಾರ್ಗದರ್ಶನದಲ್ಲಿ ಜ್ಞಾನಭಾರತಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಸಾಹಿತಿ ಚೆನ್ನಮ್ಮ ವಲ್ಲಾಪೂರೆ, ಸ್ಯಾಮಸನ್ ಬಲ್ಲೂರ, ಗುರುನಾಥ ದೇಶಮುಖ, ಪ್ರಕಾಶ ದೇಶಮುಖ, ಬಸವರಾಜ ಮಸ್ಕಲೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...