ಕರ್ತವ್ಯಲೋಪ, ನಿರ್ಲಕ್ಷ್ಯತನ ಆರೋಪದಡಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಇರ್ಷಾನಾ ಅವರನ್ನು ಅಮಾನತುಗೊಳಿಸಲಾಗಿದೆ.
ʼ2025ರ ಆಗಸ್ಟ್ 8ರಂದು ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗು ಜನನದ ನಂತರ ತಾಯಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು. ಬಾಣಂತಿಗೆ ಸೂಕ್ತ ಚಿಕಿತ್ಸೆ ನೀಡದೇ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಕಾರಣ ಅಮಾನತುಗೊಳಿಸಲಾಗಿದೆʼ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಶಿಸ್ತು ಪ್ರಾಧಿಕಾರ ಮತ್ತು ಆಯುಕ್ತ ಶಿವಕುಮಾರ ಕೆ.ಬಿ.ಆದೇಶದಲ್ಲಿ ತಿಳಿಸಿದ್ದಾರೆ.
ಅಮಾನತುಗೊಂಡಿರುವ ಡಾ.ಇರ್ಷಾನಾ ಅವರ ಲೀನ್ ಅನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲʼ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಕಲಬುರಗಿ | ಕುಡಿತ ಮತ್ತಿನಲ್ಲಿ ಅಸಭ್ಯ ವರ್ತನೆ : ಶಿಕ್ಷಕ ಅಮಾನತು