ಬೀದರ್‌ | ಕಬೀರಾಬಾದ್ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್‌ ವಿತರಣೆ

Date:

ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿದ್ದು, ಬದುಕಿನಲ್ಲಿ ಯಶಸ್ಸಿನ ಕಡೆಗೆ ತಮ್ಮ ಅವಿರತ ಪ್ರಯತ್ನವಿರಲಿ ಎಂದು ಸಾಮಾಜಿಕ ಕಾರ್ಯಕರ್ತ ವಿನೋದ ರತ್ನಾಕರ್‌ ಹೇಳಿದರು.

- Advertisement -

ಬೆಂಗಳೂರಿನ ಅವಿರತ ಟ್ರಸ್ಟ್‌ ವತಿಯಿಂದ ಬೀದರ್‌ ತಾಲ್ಲೂಕಿನ ಕಬೀರಾಬಾದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶನಿವಾರ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ʼನೈತಿಕ ಮೌಲ್ಯ ಶಿಕ್ಷಣ ಜೊತೆಗೆ ಮಕ್ಕಳಲ್ಲಿ ಸಂಸ್ಕಾರ ಶಿಕ್ಷಣ ಬೀಜ ಬಿತ್ತುವುದು ಮುಖ್ಯವಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ʼಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಸರ್ಕಾರದಿಂದ ಪಠ್ಯ ಪುಸ್ತಕ, ಸಮವಸ್ತ್ರ, ಬಿಸಿಯೂಟ ವಿತರಿಸುತ್ತಿದೆ. ಆದರೆ, ಸರ್ಕಾರಿ ಶಾಲೆಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅವಿರತ ಟ್ರಸ್ಟ್‌ ವತಿಯಿಂದ ನೋಟ್ ಬುಕ್‌ ವಿತರಣೆ ಕಾರ್ಯ ಶ್ಲಾಘನೀಯ. ಇದು ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರೇರಣೆಯಾಗಿದೆʼ ಎಂದು ನುಡಿದರು.

WhatsApp Image 2025 07 06 at 8.57.33 AM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಗುರು ಜಗದೇವಿ ಅವರು ಮಾತನಾಡಿ, ʼಬೆಳೆಯುವ ಪೈರು ಮೊಳಕೆಯಲ್ಲಿʼ ಎಂಬಂತೆ ಮಕ್ಕಳ ಶಿಕ್ಷಣ ಗುಣಮಟ್ಟ ವೃದ್ಧಿಗೆ ಪ್ರಾಥಮಿಕ ಶಾಲೆಗಳ ಪಾತ್ರ ಬಹುಮುಖ್ಯವಾಗಿದೆ. ಮಕ್ಕಳ ನೈತಿಕ ಶಿಕ್ಷಣಕ್ಕೆ ಪೋಷಕರ ಹಾಗೂ ಶಿಕ್ಷಕರ ಕಾಳಜಿ ಅಗತ್ಯವಿದೆ. ಸರ್ಕಾರಿ ಶಾಲೆಗಳ ಬಗ್ಗೆ ಅವಿರತ ಟ್ರಸ್ಟ್‌ ಅವರ ಕಾಳಜಿ ಮೆಚ್ಚುವಂತಹದುʼ ಎಂದು ನುಡಿದರು.

ಉಪನ್ಯಾಸಕ ಈಶ್ವರ ಮಿತ್ರಾ ಮಾತನಾಡಿ, ʼಸರ್ಕಾರ ನೀಡುವ ಹಲವು ಸೌಲಭ್ಯಗಳು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಹೆಚ್ಚು ಅಧ್ಯಯನ ರೂಢಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಈ ದಿಸೆಯಲ್ಲಿ ಶಿಕ್ಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶನ ನೀಡಬೇಕುʼ ಎಂದರು.

ʼಸರ್ಕಾರ ಅಲ್ಲದೆ ಸಂಘ-ಸಂಸ್ಥೆಗಳ ಸಹಕಾರದಿಂದ ಸರ್ಕಾರಿ ಶಾಲೆಯ ಮಕ್ಕಳು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರಿ ಶಾಲೆಯೂ ಮುಂಬರುವ ದಿನಗಳಲ್ಲಿ ಮಾದರಿ ಶಾಲೆಯಾಗಿ ರೂಪಿಸುತ್ತೇವೆʼ ಎಂದು ಶಿಕ್ಷಕ ವಿಠಲ ವರ್ಮಾ ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ; ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲ ತೀರ್ಮಾನ

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಾನಾಜಿ ಪಾಟೀಲ, ಸಾಮಾಜಿಕ ಚಿಂತಕ ದಿಲೀಪ ಚಂದಾ ಮತ್ತಿತರರು ಮಾತನಾಡಿದರು.

ಅವಿರತ ಟ್ರಸ್ಟ ಸದಸ್ಯ ಪ್ರವೀಣ ರತ್ನಾಕರ್ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷೆ ಮಮತಾ ಸೇರಿದಂತೆ ಪ್ರಮುಖರಾದ ಪ್ರೇಮಸಾಗರ, ಸಕ್ಪಾಲ ಕಾಂಬಳೆ, ಆನಂದ ಮಾಸಿಮಾಡೆ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...