ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ನಾಲ್ವರು ಶಿಕ್ಷಕರಿಗೆ ನೋಟಿಸ್‌ ಜಾರಿ

Date:

ಔರಾದ್ (ಬಿ) ತಾಲೂಕಿನಲ್ಲಿ ಅ. 7 ಮತ್ತು ಅ.13 ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ನಾಲ್ವರು ಶಿಕ್ಷಕರಿಗೆ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಸರ್ಕಾರಿ ನೌಕರರಾಗಿರುವ ಶಿಕ್ಷಕರು ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದು, ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸೇನೆ ಔರಾದ್‌ ತಾಲೂಕು ಘಟಕ ಹಾಗೂ ಬಹುಜನ ಸೇವಾ ಸಮಿತಿ ಬೀದರ್‌ ವತಿಯಿಂದ ದೂರು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದೂರಿನ್ವಯ ಶಿಕ್ಷಕರಾದ ಮಹಾದೇವ್ ಚಿಟಗಿರೆ, ಶಾಲಿವಾನ್ ಉದಗಿರೆ, ಪ್ರಕಾಶ್ ಬರದಾಪೂರೆ ಹಾಗೂ ಸತೀಶ್ ಮಾನಕಾರಿ ಅವರಿಗೆ ಶಿಕ್ಷಣ ಇಲಾಖೆ ಮಂಗಳವಾರ ಕಾರಣ ಕೇಳುವ ನೋಟಿಸ್ ನೀಡಿದೆ.

ʼಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ತಾವು ಭಾಗಿಯಾಗಿರುವ ಕುರಿತು ವಿಡಿಯೋ ಮತ್ತು ಭಾವಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದಿವೆ. ತಾವು ಸರ್ಕಾರಿ ನೌಕರರು ಆಗಿರುವುದರಿಂದ ಯಾವುದೇ ಪ್ರಕಾರ ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ತಾವು ಆರೆಸ್ಸೆಸ್ ಪಥ ಸಂಚಲನದಲ್ಲಿ ಭಾಗವಹಿಸಿ ಸರಕಾರದ ಸೇವಾ ನಿಬಂಧನೆಗೆ ವಿರುದ್ಧವಾಗಿ ಕರ್ತವ್ಯ ಮಾಡಿರುವಿರಿʼ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

ಕಾರಣ ಕೇಳುವ ಈ ನೋಟಿಸ್‌ಗೆ ಲಿಖಿತ ಹೇಳಿಕೆಯನ್ನು ತಾವು ಖುದ್ದಾಗಿ ಬಂದು ಈ ಕಚೇರಿಗೆ ಬಂದು ಸಲ್ಲಿಸಬೇಕು. ಇಲ್ಲವಾದಲ್ಲಿ ಏಕಪಕ್ಷೀಯವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957ರ ಅನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...