ಬೀದರ್‌ | ಸ್ಮಶಾನ ಭೂಮಿ ಮಂಜೂರಾತಿಗೆ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಆಗ್ರಹ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಎನ್‌ಎಸ್‌ಒಎಸ್‌ವೈಎಫ್‌ ಕಾರ್ಯಕರ್ತರು ಬೀದರ್‌ ಜಿಲ್ಲೆಯ ಔರಾದ್‌ ತಾಲೂಕು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

- Advertisement -

“ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಔರಾದ್ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ‌ಸಾಧ್ಯವಾಗುತ್ತಿಲ್ಲ. ಶೈಕ್ಷಣಿಕ ಅಭಿವೃದ್ಧಿಗೆ ಉನ್ನತ ಶಿಕ್ಷಣ ಸಂಸ್ಥೆಗಳಿಲ್ಲ. ಉದ್ಯೋಗಕ್ಕೆ  ಯಾವುದೇ ರೀತಿಯ ಕಾರ್ಖಾನೆ, ಕಂಪನಿ, ವ್ಯಾಪಾರ ಕೇಂದ್ರಗಳಿಲ್ಲ. ಹೀಗೆ ಸುಮಾರು ಸಮಸ್ಯೆಗಳಿಗೆ ಒಳಗಾಗಿ ಬಡತನದಲ್ಲಿ ವಾಸಿಸುತ್ತಿರುವ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅಂತಿಮ ಸಂಸ್ಕಾರ ನಡೆಸಲು ಜಾಗ ಇಲ್ಲದಿರುವುದು ಜ್ವಲಂತ ಸಮಸ್ಯೆಯಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಮ್ಮ ಸಂಘಟನೆಯಿಂದ ಹಲವು ಬಾರಿ ಮನವಿ ಮಾಡಿದ್ದೇವೆ. 2017ರ ಎಪ್ರಿಲ್ 9ರಂದು ಧರಣಿ  ಸತ್ಯಾಗ್ರಹವನ್ನೂ ಮಾಡಿದ್ದೇವೆ. ಆದರೆ ನಮಗೆ ಈವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅದಕ್ಕಾಗಿ ನಮ್ಮ ಸಂಘಟನೆಯ ರಾಜ್ಯ ಸಂಚಾಲಕ ಶಿವ ಕಾಂಬಳೆ ನೇತೃತ್ವದಲ್ಲಿ ಹಲವು ಮುಖಂಡರು  ಮತ್ತೆ 2017ರ ನವೆಂಬರ್ 22ರಂದು ಮೂರು ದಿನಗಳ ಕಾಲ ನಿರಂತರವಾಗಿ   ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿಮಾ ಯೋಜನೆ ವಂಚನೆಗೆ ಕಡಿವಾಣ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

“ಬೀದರ್ ಸಹಾಯಕ ಆಯುಕ್ತ ಶಿವಕುಮಾರ ಶಿಲವಂತ  ತಹಶೀಲ್ದಾರ್ ಮುಖಾಂತರ 2017ರಲ್ಲಿ ತಾಲೂಕಿನಾದ್ಯಂತ 30 ದಿನಗಳಲ್ಲಿ ಸ್ಮಶಾನ ಭೂಮಿ ಹದ್ದುಬಸ್ತಿ ಮತ್ತು ಮಂಜೂರು ಮಾಡಬೆಕೆಂದು ಆದೇಶ ಮಾಡಿದ್ದರು. ಆದರೆ ಈವರೆಗೆ ಔರಾದ್ ಪಟ್ಟಣ ಸೇರಿದಂತೆ ತಾಲೂಕಿನ ಯಾವುದೇ ಗ್ರಾಮಗಳಿಗೆ ಸ್ಮಶಾನ ಭೂಮಿ ಮಂಜೂರು ಮಾಡದಿರುವುದು ದುರಂತವೇ ಸರಿ. ಇಂಥ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಹಾಗೂ ಸ್ಮಶಾನ ಭೂಮಿ ಮಂಜೂರು ಪ್ರಕ್ರಿಯೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ, ಪ್ರವೀಣ ಕಾರಂಜೆ, ಸುನೀಲ ವಾಘಮಾರೆ, ಸಂತೋಷ ಸೂರ್ಯವಂಶಿ, ಸುಂದರ ಮೇತ್ರೆ, ದಿನೇಶ ಶಿಂಧೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...