ಬೀದರ್‌ | ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ಹಾನಿ; ಕಂಗಾಲಾದ ರೈತರು

Date:

ಈರುಳ್ಳಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು ಯೋಜಿಸುತ್ತಿದ್ದರು. ಆ ವೇಳೆಗೆ ಅಕಾಲಿಕ ಮಳೆ ಸುರಿದ ಪರಿಣಾಮ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ಈರುಳ್ಳಿ ಬೆಳಿದಿದ್ದ ರೈತರು ಕಂಗಾಲಾಗಿದ್ದಾರೆ.

ಬೀದರ್‌ ಜಿಲ್ಲೆ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಈರುಳ್ಳಿ ಬೆಳೆದು ಖುಷಿಯಲ್ಲಿದ್ದ ರೈತರು ಅಕಾಲಿಕ ಮಳೆಯಿಂದ ಕಣ್ಣೀರು ಹಾಕುತ್ತಿದ್ದಾರೆ. ಗ್ರಾಮದ ಅನೇಕ ರೈತರು ಬೆಳೆದ ಈರುಳ್ಳಿ ಮಳೆಯಲ್ಲಿ ತೋಯ್ದುಹೋಗಿದ್ದು, ಅದನ್ನು ತೆಗೆಯಲು ಈಗ  ಹರಸಾಹಸ ಪಡಬೇಕಾಗುತ್ತಿದೆ. ಕೈ ಸೇರಬೇಕಿದ್ದ ಬೆಳೆ ನೀರಿನಲ್ಲಿ ಕೊಳೆಯುತ್ತಿದೆ.

“ಅಕಾಲಿಕ ಮಳೆಯಿಂದ ಈರುಳ್ಳಿ ಬೆಳೆ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ನಮ್ಮ ಬದುಕು ಬೀದಿಪಾಲಾಗುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸೂಕ್ತ ಪರಿಹಾರ ನೀಡಲು ಮುಂದಾಗಬೇಕು” ಎಂದು ರೈತರು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಜಲಾವೃತವಾಗಿರುವ ಈರುಳ್ಳಿ ಬೆಳೆ

“ಔರಾದ ತಾಲೂಕಿನ ಬಹುತೇಕ ಗ್ರಾಮಗಳ ಈರುಳ್ಳಿ ಬೆಳೆಗಾರರ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ‌ಹೀಗಾಗಿ ಮಳೆ ಅವಾತರದಿಂದ ಸಂಕಷ್ಟ ಎದುರಾಗಿರುವ ರೈತರಿಗೆ ಪರಿಹಾರ ಒದಗಿಸುವುದು ಅನಿವಾರ್ಯವಾಗಿದೆ” ಎಂದು ಅವಲತ್ತುಕೊಂಡರು.

ಈ ಸುದ್ದಿ ಓದಿದ್ದೀರಾ? ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

“ಸಾಲ ಸೋಲ ಮಾಡಿ ಈರುಳ್ಳಿ ಬೆಳೆದಿದ್ದ ಬೆಳಗಾರರಿಗೆ ಭಾರೀ ಮಳೆಯಿಂದ ನಷ್ಟ ಉಂಟಾಗಿದೆ. ಕಳೆದ ಕೆಲದಿನಗಳಿಂದ ಮಳೆ ಅಬ್ಬರಿಸಿದ್ದು, ಜಮೀನುಗಳು ಜಲಾವೃತವಾಗಿವೆ. ಇದರಿಂದಾಗಿ ಈರುಳ್ಳಿ ಗಡ್ಡೆಗಳು ಸಂಪೂರ್ಣವಾಗಿ ಹಾಳಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ” ಎಂದರು.

“ಮೂರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದು ಈ ವರ್ಷ ಉತ್ತಮ ಇಳುವರಿ ಬಂದಿತ್ತು. ವಾರದಿಂದ ಬಿಡುವಿಲ್ಲದೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ನೀರುಪಾಲಾಗಿ ಕೊಳೆಯುತ್ತಿದೆ. ಇದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ.‌ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು” ಎಂದು ಈರುಳ್ಳಿ ಬೆಳೆಗಾರ ಖಂಡೆರಾವ ಪಾಟೀಲ ಕೊಳ್ಳೂರ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಬೆಂಗಳೂರಿಗೆ ಪ್ರಧಾನಿ ಮೋದಿ; ಸಂಚಾರ ಮಾರ್ಗ ಬದಲಾವಣೆ

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...