ಬೀದರ್‌ | ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಜಪ್ತಿ; 8 ಆರೋಪಿಗಳ ಬಂಧನ

Date:

ಅನುಮತಿ ಪಡೆಯದೆ ತಂಬಾಕು ವಸ್ತುಗಳ ಕಲಬೆರಕೆ ಮಾಡಿ ತಯಾರಿಸಿ ಸಂಗ್ರಹಿಸಿಟ್ಟಿದ್ದ ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಹಾಗೂ ₹25 ಲಕ್ಷ ಮೌಲ್ಯದ ಒಂದು ವಾಹನವನ್ನು ಜಪ್ತಿ ಮಾಡಿ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹೇಳಿದರು.

- Advertisement -

ಬೀದರ್‌ ನಗರದ ಗಾಂಧಿ ಗಂಜ ಹಾಗೂ ನೂತನ ನಗರ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತೇಕ ಕಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿತರಿಂದ ಗುಟ್ಕಾ, ಪಾನ್‌ ಮಸಾಲ ಮತ್ತು ಒಂದು ಐಚರ್‌ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಭಾನುವಾರ ಸುದ್ದುಗೋಷ್ಠಿಯಲ್ಲಿ ಅವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಲ್ಲಿ, ಏನೇನು ಜಪ್ತಿ ?

ಬೀದರ್ ನಗರದ ಚಿದ್ರಿಯ ಬುತ್ತಿ ಬಸವಣ್ಣ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ತಂಬಾಕು ವಸ್ತುಗಳ ಕಲಬೆರಕೆ ಗುಟಕಾ ಸಾಮಗ್ರಿ, ಪಾನ್ ಮಸಾಲಾ ಸಂಗ್ರಹಿಸಿಟ್ಟು, ಲಾರಿಯೊಂದರಲ್ಲಿ ತುಂಬುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ₹1.51 ಕೋಟಿ ಮೌಲ್ಯದ ಪಾನ್‌ ಮಸಾಲ, ತಂಬಾಕು ವಸ್ತು ಹಾಗೂ ಗುಟಕಾ ತಯಾರಿಸುವ ವಿವಿಧ ಸಾಮಾಗ್ರಿ ಮತ್ತು ₹25 ಲಕ್ಷ ಮೌಲ್ಯ ಒಂದು ಲಾರಿ ಸೇರಿ ಒಟ್ಟು ₹1.76 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಗಾಂಧಿ ಗಂಜ ಠಾಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ.

WhatsApp Image 2025 08 31 at 2.14.17 PM 1

ನೂತನ ನಗರ ಠಾಣೆ ವ್ಯಾಪ್ತಿಯ ಬೀದರ್‌ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಶೆಡ್‌ವೊಂದರಲ್ಲಿ ಸರ್ಕಾರದ ಅನುಮತಿ ಪಡೆಯದೆ ಮಾನವ ಆರೋಗ್ಯಕ್ಕೆ ಹಾನಿಕಾರವಾದ ಪಾನ್ ಮಸಾಲ, ಕೆಮಿಕಲ್ ಹಾಗೂ ಕಚ್ಚಾ ವಸ್ತು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಒಟ್ಟು ₹43.30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಗಂಜ ಹಾಗೂ ನೂತನ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿ | ₹100 ಕೋಟಿ ವಿಶೇಷ ಪರಿಹಾರ ಕೊಡಿ : ಸಿಎಂಗೆ ಈಶ್ವರ ಖಂಡ್ರೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...