ಬೀದರ್ | ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

Date:

ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

- Advertisement -

ಔರಾದ ತಾಲ್ಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತ್ ಪಿಡಿಒ ಅನಿತಾ ರಾಠೋಡ್ ಸಿಕ್ಕಿ ಬಿದ್ದ ಅಧಿಕಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಧೂಪತಮಹಾಗಾಂವ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಜೀರ್ಗಾ(ಬಿ) ಗ್ರಾಮದ ರಾಜಕುಮಾರ್ ಪಾಟೀಲ್ ಎಂಬುವವರ ನಿವೇಶನದ ಡಿಜಿಟಲ್ ಖಾತಾ ಮಾಡಿಕೊಡಲು ಪಿಡಿಒ ಅನಿತಾ ಅವರು ₹12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ರಾಜಕುಮಾರ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಪಿಡಿಒ ಅನಿತಾ ರಾಠೋಡ್ ಹಾಗೂ ಅವರ ಪತಿ ದಯಾನಂದ ರಾಠೋಡ್ ಬುಧವಾರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿಎಸ್ಪಿ ಹಣಮಂತರಾವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಿಬ್ಬಂದಿ, ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...