ಬೀದರ್‌ | ವಚನ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ : ಶಿವಕುಮಾರ ಉಪ್ಪೆ

Date:

ಬದುಕಿನಲ್ಲಿ ನಡೆ-ನುಡಿ ಒಂದಾಗಿಸಿಕೊಂಡು ಶರಣರ ವಚನ ಸಾಹಿತ್ಯದ ಮಾರ್ಗದಲ್ಲಿ ಮುನ್ನಡೆದರೆ ಯಶಸ್ವಿಯಾಗಲು ಸಾಧ್ಯವಿದೆ. ವಚನ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ರೂಪುಗೊಳ್ಳುತ್ತದೆ. ಭಾರತ ಸಂವಿಧಾನದಲ್ಲಿ ಬಸವಾದಿ ಶರಣರ ವಚನಗಳು ಎದ್ದು ಕಾಣುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಶಿವಕುಮಾರ ವ್ಹಿ. ಉಪ್ಪೆ ಹೇಳಿದರು.

- Advertisement -

ಬೀದರ ನಗರದ ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ 171ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ʼದೇಶದಲ್ಲಿ ಪಾಶ್ಚಿಮಾತ್ಯ ಶಿಕ್ಷಣದ ಬೇರನ್ನು ಲಾರ್ಡ್ ಮೆಕಾಲೆರವರು ಬಿತ್ತಿದ್ದಾರೆ. ಇದರಿಂದ ಭಾರತೀಯ ಸಂಸ್ಕೃತಿ, ಪರಂಪರೆ ಮೇಲೆ ಕೆಟ್ಟಪರಿಣಾಮ ಬೀರಿದೆ. ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಮಹಾತ್ಮರ ಜೀವನ ಸೇರ್ಪಡೆಯಾದರೆ ಯುವ ಜನಾಂಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ. ಮಕ್ಕಳಲ್ಲಿ ದೇಶಿ ಸಂಸ್ಕೃತಿ, ಪರಂಪರೆಯನ್ನು ಉಪದೇಶಿಸುವುದು ಔಚಿತ್ಯಪೂರ್ಣವಾದದ್ದುʼ ಎಂದರು.

ಸಾನಿಧ್ಯ‌ ವಹಿಸಿದ ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ವಿಶ್ವಗುರು ಬಸವಣ್ಣನವರು ʼಸದುವಿನಯವೇ ಸದಾಶಿವನೊಲುಮೆ’ ಎನ್ನುವಂತೆ ಸಕಲರಲ್ಲಿ ದೇವರನ್ನು ಕಂಡಿದರು. ಮನುಷ್ಯ ಅಹಂಕಾರ, ಸ್ವಾರ್ಥ ಬಿಟ್ಟು ವಿನಯಶೀಲತೆ ಬೆಳೆಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಕಾಯಕ, ದಾಸೋಹ ಮೈಗೂಡಿಸಿಕೊಂಡವರು ಶಿವನ ಒಲುಮೆಗೆ ಅರ್ಹರಾಗುತ್ತಾರೆʼ ಎಂದು ನುಡಿದರು.

ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷ ಡಾ.ಸಿದ್ದಾರಾಮ ಬೆಲ್ದಾಳ ಶರಣರು ಮಾತನಾಡಿ, ʼಜಿಲ್ಲೆಯಲ್ಲಿ ಭಾಲ್ಕಿ ಹಿರೇಮಠದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆ ಅನನ್ಯ. ತಾಂತ್ರಿಕ ಜಗತ್ತಿನಲ್ಲಿ ಮೊಬೈಲ್ ಸಂಸ್ಕೃತಿಯಿಂದ ಪುಸ್ತಕ ಅಧ್ಯಯನ ಕಡಿಮೆಯಾಗುತ್ತಿದೆ. ಮೊಬೈಲ್ ಸಂಸ್ಕೃತಿಗೆ ಮಕ್ಕಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ ಶರಣರ ಮಾರ್ಗದಲ್ಲಿ ನಡೆಯುವಂತೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕುʼ ಎಂದು ಪ್ರತಿಪಾದಿಸಿದರು.

ಬೆಂಗಳೂರಿನ ಯೋಗಗುರು ಮಾತನಾಡಿದರು. ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ವಿದ್ಯಾರ್ಥಿನಿ ರಾಧಿಕಾ ವಚನ ಚಿಂತನೆ ಮಂಡಿಸಿದರು. ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ.ಎಸ್.ಬಿ.ಬಿರಾದರ್ ಅಧ್ಯಕ್ಷತೆ ವಹಿಸಿದರು. ಮಹಾಲಿಂಗ ಮಹಾಸ್ವಾಮೀಜಿ ಸಮ್ಮುಖ ವಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ವಿಶ್ವವಿದ್ಯಾಲಯ, ಬ್ರಿಡ್ಜ್‌ ವಾಟರ್‌ ಸ್ಟೇಟ್ ವಿ.ವಿ. ನಡುವೆ ಒಪ್ಪಂದ

ಕಾರ್ಯಕ್ರಮದಲ್ಲಿ ದಾಸೋಹಿಗಳಾದ ಮಹಾನಂದಾ ಸಂಗಮೇಶ ಶೆಟಕಾರ ಗುರುಪೂಜೆ ನೆರೆವೇರಿಸಿದರು. ವಚನಶ್ರೀ ಹಾಗೂ ಚನ್ನಬಸಪ್ಪಾ ನೌಬಾದೆ ವಚನ ಗಾಯನ ನಡೆಸಿಕೊಟ್ಟರು. ಪ್ರಮುಖರಾದ ಉಮಾಕಾಂತ ಮೀಸೆ, ಸತ್ಯಕ್ಕ, ಜ್ಯೋತಿ, ಸಂಗ್ರಾಮಪ್ಪ ಬಿರಾದರ, ಸಂಗ್ರಾಮ ಎಂಗಳೆ, ಗುರುನಾಥ ಬಿರಾದರ, ಶ್ರೀಕಾಂತ ಬಿರಾದರ, ಅಪ್ಪಾರಾವ ನವಾಡೆ, ಲಕ್ಷ್ಮೀಬಾಯಿ ರಾಮಶೆಟ್ಟಿ ಮಾಳಗೆ, ಮೀನಾಕ್ಷಿ ಪಾಟೀಲ್, ಮಲ್ಲಿಕಾರ್ಜುನ ಹುಡಗೆ, ರಾಮನಗೌಡ, ರಜೀಯಾ ಬಳಬಟ್ಟಿ, ತೀರ್ಥಮ್ಮಾ, ಮಹಾದೇವಿ, ವೈಜಿನಾಥ ಬಿರಾದರ, ಶಿವಾನಿ, ರೂಪಾಲಿ ಹಾಗೂ ಅರ್ಪಿತಾ ಉಪಸ್ಥಿತರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...