ಬೀದರ್ ಜಿಲ್ಲಾ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪಿಎಸ್ಐ ಘನಶ್ಯಾಮ ಅವರು ಪಾಲ್ಗೊಂಡಿದ್ದರು.
ಇದಕ್ಕೆ ತೆರೆದ ವಾಹನದಲ್ಲಿ ನಿಂತು ಕವಾಯತು ಪರಿವೀಕ್ಷಣೆ ನಡೆಯಿತು. ಐದು ತುಕಡಿಗಳಿಂದ ಪರೇಡ್ ಗೌರವ ರಕ್ಷೆ ಸ್ವೀಕರಿಸಿದರು. ರಾಷ್ಟ್ರಧ್ವಜ ಮತ್ತು ಪೊಲೀಸ್ ಧ್ವಜಗಳ ಭವ್ಯ ಮೆರವಣಿಗೆಯೂ ನಡೆಯಿತು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪುಜಾರಿ ಸೇರಿದಂತೆ ಜಿಲ್ಲೆಯ ಎಲ್ಲಾ ಪೋಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.