ಬೀದರ್ | ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ; ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

Date:

ದೇಶಕ್ಕೆ ಪದಕ ತಂದುಕೊಟ್ಟ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ಆತನನ್ನು ಶಿಕ್ಷಿಸಬೇಕೆಂದು ಪ್ರಜಾ ಪ್ರಭುತ್ವ ಸಮಿತಿ ಒತ್ತಾಯಿಸಿದೆ.

ಬ್ರಿಜ್ ಭೂಷಣ ಶರಣ್ ಸಿಂಗ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಜಾ ಪ್ರಭುತ್ವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಭಾಲ್ಕಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಪ್ರಜಾ ಪ್ರಭುತ್ವ ಸಮಿತಿಯ ಗಗನ್ ಫುಲೆ ಮಾತನಾಡಿ, “ಭಾರತಕ್ಕೆ ಒಲಂಪಿಕ್ಸ್, ಏಷಿಯನ್ ಗೇಮ್ಸ್, ಕಾಮವೆಲ್ತ್‌ ಗೇಮ್ಸ್‌ ಸೇರಿದಂತೆ ಹಲವಾರು ರಾಷ್ಟ್ರಿಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ತಂದುಕೊಟ್ಟ ಕ್ರೀಡಾಪಟುಗಳಲ್ಲಿ ಕುಸ್ತಿಪಟುಗಳು ಮುಂಚೂಣಿಯಲ್ಲಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ವಿಷಯ. ಆದರೆ, ಅದೇ ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಕಳೆದ ನಾಲ್ಕೈದು ತಿಂಗಳಿಂದ ದೆಹಲಿಯ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ದುರಂತವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ರೈತ ಸಂಘ ಪ್ರತಿಭಟನೆ

“ಡಬ್ಲೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಎನ್ನುವ ವ್ಯಕ್ತಿ ತಮ್ಮ ಮೇಲೆ ಲೈಂಗಿಕ ಶೋಷಣೆ, ದಬ್ಬಾಳಿಕೆ, ಬಲವಂತ ಸ್ಪರ್ಶ ಹೀಗೆಯೇ ಹಲವಾರು ರೀತಿಯ ಕಿರುಕುಳ ನೀಡಿದ್ದಾನೆಂದು ಕುಸ್ತಿಪಟುಗಳು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ದೌರ್ಜನ್ಯದ ವಿರುದ್ಧ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಎನ್ನುವವನ ಮೇಲೆ ಹಲವಾರು ಪ್ರಕರಣಗಳು ದಾಖಲಾದರೂ ಕೂಡ ಅವನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ಆತನ ಬೆನ್ನಿಗೆ ನಿಂತು ರಕ್ಷಿಸುತ್ತಿರುವುದು ಮೆಲ್ನೋಟಕ್ಕೆ ಕಾಣುತ್ತಿದೆ. ಕುಸ್ತಿಪಟುಗಳು ಪದಕ ಗೆದ್ದು ಬಂದಾಗ ಶ್ಲಾಘಿಸಿದ ಸರ್ಕಾರ ಅದೇ ಕುಸ್ತಿಪಟುಗಳಿಗೆ ಅನ್ಯಾಯವಾದಾಗ ಅವರ ಜೊತೆ ನಿಲ್ಲದೆ ಇರುವುದು ದೇಶಕ್ಕೆ ಮಾಡಿದ ಅವಮಾನವಾಗಿದೆ. ಬ್ರಿಜ್ ಭೂಷಣ ಶರಣ್ ಸಿಂಗ್ ಎನ್ನುವವನನ್ನು ಕೂಡಲೇ ಬಂಧಿಸಿ ತೀವ್ರ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಜಾಪ್ರಭುತ್ವ ಸಮಿತಿಯ ಶಿವಕುಮಾರ್ ಜಾಧವ್, ಜೈಪ್ರಕಾಶ್ ಸಿಂಧೆ, ಶ್ಯಾಮಶುಂದರ್ ಗುಲಾಬೆ, ಸತೀಶ್ ಫುಲೆ, ಚಿತ್ರಶೇನ್ ಫುಲೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ...

ಚಿತ್ರದುರ್ಗ | ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ; ಮೊಳಕಾಲ್ಮುರು ಪ.ಪಂ. ಅಧಿಕಾರಿಯ ತಲೆದಂಡ

ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ,...