ಬೀದರ್‌ | ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್‌ ದರ ದುಬಾರಿ; ಕ್ರಮಕ್ಕೆ ಆಗ್ರಹ

Date:

ದೀಪಾವಳಿ ಹಬ್ಬಕ್ಕೆ ನಗರಗಳಿಂದ ತಮ್ಮ ಊರುಗಳಿಗೆ ಮರಳುವ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಸೇನೆಯ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರ ನೇತೃತ್ವದಲ್ಲಿ ಬೀದರ್ ನಗರದಲ್ಲಿ ಶನಿವಾರ ಸಾರಿಗೆ ಇಲಾಖೆಯ ಕಲಬುರಗಿ ಜಂಟಿ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಕೆ.ಬಿರಾದಾರ ಅವರಿಗೆ ಸಲ್ಲಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಬಹಳಷ್ಟು ಜನ ಬದುಕಲು, ಶಿಕ್ಷಣ ಹಾಗೂ ಕಚೇರಿ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಿರುತ್ತಾರೆ. ದೀಪಾವಳಿ ಆಚರಿಸಲು ಸ್ವಂತ ಊರಿಗೆ ವಾಪಸ್ಸಾಗುತ್ತಾರೆ. ಆದರೆ, ಖಾಸಗಿ ಬಸ್‍ನವರು ದೀಪಾವಳಿ ದೃಷ್ಟಿಕೋನದಲ್ಲಿ ಇಟ್ಟುಕೊಂಡು ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆʼ ಎಂದು ಗಣೇಶ ಪಾಟೀಲ ಗಮನ ಸೆಳೆದರು.

ʼಬೆಂಗಳೂರಿನಿಂದ ಬೀದರ್‍ಗೆ ಖಾಸಗಿ ಬಸ್‍ಗಳ ಟಿಕೆಟ್ ದರ ₹ 800 ರಿಂದ ₹1,200 ವರೆಗೆ ಇದೆ. ಆದರೆ, ಇದೀಗ ಖಾಸಗಿ ಬಸ್‍ನವರು ₹4,000 ರಿಂದ ₹5,000 ವರೆಗೆ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಬೀದರ್ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ʼದುಬಾರಿ ಟಿಕೆಟ್ ದರ ಪಡೆಯುತ್ತಿರುವ ಖಾಸಗಿ ಬಸ್‍ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ಸಾರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ; ಉಸ್ತುವಾರಿ ಸಚಿವರ ಮನೆ ಎದುರು ಧರಣಿ ಎಚ್ಚರಿಕೆ

ನಮ್ಮ ಕರ್ನಾಟಕ ಸೇನೆಯ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಉಪಾಧ್ಯಕ್ಷ ರವಿ ಪಾಟೀಲ, ಬೀದರ್ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸಾಯಿಕಿರಣ್ ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...