ಬೀದರ್ | ಪ್ರವಾದಿ ಮಹಮ್ಮದ್ ಜಗತ್ತಿನ ಶ್ರೇಷ್ಠ ಮಾರ್ಗದರ್ಶಕ: ಮಹಮ್ಮದ್ ನಿಜಾಮುದ್ದೀನ್

Date:

ಪ್ರವಾದಿ ಮಹಮ್ಮದ್ ಅವರು ಜಗತ್ತು ಕಂಡ ಅತಿ ಶ್ರೇಷ್ಠ ಮಾನವ ಹಾಗೂ ಅತ್ಯುತ್ಕೃಷ್ಟ ಮಾರ್ಗದರ್ಶಕರಾಗಿದ್ದರು. ಯಾವುದೇ ಒಂದು ಜನಾಂಗಕ್ಕೆ ಇರದೆ ಸಕಲ ಮಾನವ ಕುಲಕ್ಕೆ ಸರ್ವಕಾಲಿಕ ಮಾರ್ಗದರ್ಶನವಾಗಿದೆ. ಜಗತ್ತಿನಲ್ಲಿ ಸಾಮರಸ್ಯದ ಬದುಕಿಗೆ ಪ್ರವಾದಿಗಳು ಮುನ್ನುಡಿ ಬರೆದಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ಮಹಮ್ಮದ್ ನಿಜಾಮುದ್ದೀನ್ ಹೇಳಿದರು.

- Advertisement -

ಬೀದರ್‌ನಲ್ಲಿ ಜಮಾತೆ ಇಸ್ಲಾಮಿ ಹಿಂದ್ ಏರ್ಪಡಿಸಿದ ಪ್ರವಾದಿ ಮಹಮ್ಮದ್ ಅವರ ಜೀವನದ ಕುರಿತು ಉಪನ್ಯಾಸ ಹಾಗೂ ಸಾಹಿತಿ, ಶಿಕ್ಷಕ ಡಾ. ಸಂಜೀವಕುಮಾರ ಅತಿವಾಳೆ ಯವರ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಮಾತನಾಡಿ , “ಶಿಕ್ಷಕ ಸಂಜೀವಕುಮಾರ ಅತಿವಾಳೆ ಅವರು ಕನ್ನಡದ ಅಪ್ಪಟ ಅಭಿಮಾನಿಯಾಗಿದ್ದು, ಕನ್ನಡದ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಎಲೆಮರೆ ಕಾಯಿಯಂತೆ ಇರುವ ಪ್ರತಿಭಾವಂತರು,  ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವಂಥವರನ್ನು ಗುರುತಿಸಿ ಪ್ರೋತ್ಸಾಹಿಸುವುದಕ್ಕಾಗಿ ತಮ್ಮ ಸ್ವಂತ ನಿವೇಶನದಲ್ಲಿ ಸಭಾಂಗಣ ನಿರ್ಮಾಣ ಮಾಡಿ ಅವರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ” ಎಂದು ತಿಳಿಸಿದರು.

ರೇಣುಕಾ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಅಶೋಕ್ ಬೂದಿಹಾಳ ಮಾತನಾಡಿ , “ಸಮಾಜದಲ್ಲಿ ಮುಂದೆ ಬರಬೇಕಾದರೆ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಮುಂದುವರೆದರೆ ಯಶಸ್ವಿಯಾಗಬಹುದು” ಎಂದು ತಿಳಿಸಿದರು.

ಜಮಾತೆ ಇಸ್ಲಾಮಿ ಹಿಂದ್ ಬೀದರ್ ಘಟಕದ ಅಧ್ಯಕ್ಷ ಮಹಮ್ಮದ್ ಮೌಜಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,‌ “ಪ್ರವಾದಿ ಮಹಮ್ಮದರು ಏಕ ದೇವೋಪಾಸನೆಯನ್ನು ಪಾಲಿಸಲು ತಿಳಿಸಿದರು. ವ್ಯಕ್ತಿ ಪೂಜೆಯನ್ನು, ಭಾವಚಿತ್ರ ಪೂಜೆ ತಿರಸ್ಕರಿಸಿ ಮಹಿಳೆಯರಿಗೆ ಸಮಾನ ಸ್ಥಾನಮಾನ ಒದಗಿಸಲು ಪ್ರಯತ್ನಿಸಿದರು” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಚುರುಕು

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಸಾಹಿತಿ ಶಿಕ್ಷಕ ಡಾ. ಸಂಜೀವಕುಮಾರ ಅತಿವಾಳೆಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...