ಬೀದರ್‌ | ನಾಳೆ ವೀರಶೈವ-ಲಿಂಗಾಯತ ಮಹಾಸಭೆ ವಿರುದ್ಧ ಪ್ರತಿಭಟನೆ

Date:

Advertisements

ಬಸವ ಜಯಂತಿ ದಿನದಂದು ಪಂಚಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕ್ರಮವನ್ನು ಖಂಡಿಸಿ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ನಾಳೆ (ಏ.26) ಬೃಹತ್ ಪ್ರತಿಭಟನೆ ನಡೆಯಲಿದೆ.

ನಗರದ ಗಾಂಧಿಗಂಜ್‍ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ನಡೆದ ಜಾಗತಿಕ ಲಿಂಗಾಯತ ಮಹಾಸಭೆಯ ವಚನ ಮಂಥನ ಮಾಸಿಕ ಚಿಂತನ ಕಾರ್ಯಕ್ರಮದಲ್ಲಿ ಸರ್ವಾನುಮತದಿಂದ ಪ್ರತಿಭಟನೆ ನಡೆಸಲು ತಿರ್ಮಾನಿಸಲಾಯಿತು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ನಾಳೆ (ಏ.26) ಬೆಳಿಗ್ಗೆ 9 ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಎಲ್ಲ ಪೂಜ್ಯರ ಹಾಗೂ ಬಸವಪರ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Advertisements

ಈ ಪ್ರತಿಭಟನಾ ನಂತರ ಬೆಳಿಗ್ಗೆ 11ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಲಾಗುವುದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!

ಸಭೆಯಲ್ಲಿ ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ, ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ, ಮಹಾಸಭಾ ಜಿಲ್ಲಾ ಘಟಕದ ಖಜಾಂಚಿ ವೀರಭದ್ರಪ್ಪ ಬುಯ್ಯಾ, ಗೌರವ ಸಲಹೆಗಾರ ಅಣ್ಣಾರಾವ್ ಮೊಗಶೆಟ್ಟಿ, ಕಾರ್ಯಕಾರಿಣಿ ಸದಸ್ಯ ರಾಜೇಂದ್ರಕುಮಾರ ಗಂದಗೆ, ರಾಷ್ಟ್ರೀಯ ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜುಕುಮಾರ ಪಾಟೀಲ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಗಣೇಶ ಬಿರಾದಾರ, ಮುಖಂಡರಾದ ವಿಶ್ವನಾಥ ಕಾಜಿ, ವಿಜಯಕುಮಾರ ಪಾಟೀಲ ಯರನಳ್ಳಿ, ಶಿವಕುಮಾರ ಕಟ್ಟೆ, ಸಿದ್ದು ಶೆಟಕಾರ್, ಉಮೇಶ ಗಾಯತೊಂಡೆ, ವೀರಶೆಟ್ಟಿ ಮರಕಲ್, ಯೋಗೇಶ ಸಿರಿಗಿರಿ, ವೀರಭದ್ರಪ್ಪ ಉಪ್ಪಿನ್, ರಾಜು ಕಮಠಾಣೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X