ಬೀದರ್ | ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ವರದಿ ಮರು ಪರಿಶೀಲನೆಗೆ ಆಗ್ರಹಿಸಿ ಪ್ರತಿಭಟನೆ

Date:

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವಾಗಿ ಸಾಂವಿಧಾನಿಕ ಮಾನ್ಯತೆ ನೀಡಬೇಕೆಂದು ಆಗ್ರಹಿಸಿ 2017 ಜುಲೈ 19ರಂದು ಬೀದರ್‌ನಲ್ಲಿ ನಡೆದಿದ್ದ ಮೊದಲ ಸಮಾವೇಶದ ನೆನಪಿಗಾಗಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ್ ರೊಟ್ಟೆ ಅವರು ಧರಣಿ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

“2018ರಲ್ಲಿ ನಿವೃತ್ತ ನ್ಯಾ. ನಾಗಮೋಹನದಾಸ್ ಅವರು ರಚಿಸಿದ್ದ ವರದಿಯನ್ನು ಪ್ರಧಾನಿ ನರೇದ್ರ ಮೋದಿ ನೇತೃತ್ವದ ಸರ್ಕಾರ ಕ್ಷುಲ್ಲಕ ಕಾರಣ ನೀಡಿ ಹಿಂದಿರುಗಿಸಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ, ವರದಿಯನ್ನು ಪುನರ್ ಪರಿಶೀಲಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮರು ಶಿಫಾರಸ್ಸು ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸಂವಿಧಾನ ಬದ್ಧವಾಗಿ ಧರ್ಮದ ಮಾನ್ಯತೆ ಪಡೆದುಕೊಂಡಿರುವ ಬೌದ್ಧ, ಮುಸ್ಲಿಂ, ಕ್ರೈಸ್ತ, ಸಿಖ್, ಜೈನ್ ಹಾಗೂ ಪಾರ್ಸಿ ಧರ್ಮದ ಬಾಂಧವರು ಸರ್ಕಾರಗಳ ಸೌಲಭ್ಯ ಪಡೆದುಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆ ನೀಡಬೇಕು” ಎಂದು ಆಗ್ರಹಿಸಿದರು.

“ವೀರಶೈವ ಮಹಾಸಭಾ, ಪಂಚಪೀಠಾಧೀಶರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವರು ನಮ್ಮ ಹೋರಾಟವನ್ನು ವಿರೋಧಿಸಿದ್ದರು. ವಿರೋಧವನ್ನು ಬದಿಗಿಟ್ಟು, ಸ್ವತಂತ್ರ ಧರ್ಮದ ಹೋರಾಟಕ್ಕೆ ಸಹಕರಿಸಬೇಕು. ಒಗ್ಗಟ್ಟು ಪ್ರದರ್ಶಿಸಿ ಮಾನ್ಯತೆಗೆ ಸಹಕರಿಸಬೇಕು” ಎಂದು ಕೋರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...