ಬೀದರ್‌ | ಸಚಿವ ಪ್ರಿಯಾಂಕ್‌ ಖರ್ಗೆ ಪರವಾಗಿ ಪ್ರತಿಭಟನೆ; ಆರ್‌ಎಸ್ಎಸ್‌ ವಿರುದ್ಧ ಆಕ್ರೋಶ

Date:

ಸರ್ಕಾರಿ ಶಾಲೆಗಳ ಜಾಗದಲ್ಲಿ ಆರ್‌ಎಸ್ಎಸ್‌ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಕಾಂಗ್ರೆಸ್‌ ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿದರು.

- Advertisement -

ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ವಿವಿಧ ಸಂಘಟನೆಗಳ ಮುಖಂಡರು ಕೈಯಲ್ಲಿ ʼನಾವು ನಿಮ್ಮೊಂದಿಗೆ ಇದ್ದೇವೆ…ಪ್ರಿಯಾಂಕ್‌ ಖರ್ಗೆ’ ಎಂಬ ಭಿತ್ತಿಫಲಕಗಳನ್ನು ಪ್ರದರ್ಶಿಸಿದರು. ʼಆರ್‌ಎಸ್‌ಆರ್, ಬಿಜೆಪಿ ಮುರ್ದಾಬಾದ್‌ʼ, ʼಆರ್‌ಎಸ್‌ಎಸ್ ಬ್ಯಾನ್‌ʼ, ʼಪ್ರಿಯಾಂಕ್‌ ಖರ್ಗೆ ಹಮ್‌ ತುಮಾರೇ ಸಾಥ್‌ ಹೈʼ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ʼಸಚಿವ ಪ್ರಿಯಾಂಕ್‌ ಖರ್ಗೆ ಡಾ.ಅಂಬೇಡ್ಕರ್ ತತ್ವ–ಸಿದ್ಧಾಂತಗಳಲ್ಲಿ ಅಚಲ ನಂಬಿಕೆ ಇಟ್ಟವರು. ಜಾತಿರಹಿತ, ವರ್ಗರಹಿತ, ಶೋಷಣೆ ಮುಕ್ತ ಸಮಾಜ ಸ್ಥಾಪನೆಗೆ ಶ್ರಮಿಸುತ್ತಿದ್ದಾರೆ. ಆದರೆ, ಅವರ ಏಳಿಗೆಯನ್ನು ಸಹಿಸದ ಜಾತಿವಾದಿಗಳು ಮಕ್ಕಳ ತಲೆಯಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇಂಥ ಸಂಘಟನೆಯ ಚಟುವಟಿಕೆಯನ್ನು ಸರ್ಕಾರಿ ಶಾಲೆ–ಕಾಲೇಜುಗಳಲ್ಲಿ ನಿರ್ಬಂಧಿಸುವಂತೆ ಪತ್ರ ಬರೆದಿದ್ದನ್ನೆ ನೆಪವಾಗಿಟ್ಟುಕೊಂಡು ಸಚಿವ ಪ್ರಿಯಾಂಕ್‌ ತೇಜೋವಧೆ, ವೈಯಕ್ತಿಕ ನಿಂದನೆ ನಡೆಸಲಾಗುತ್ತಿದೆ. ಇದು ಖಂಡನೀಯʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ʼಸಂವಿಧಾನ ತೆಗೆದು ಮನುಸ್ಮೃತಿ ತರುವುದು ಆರ್‌ಎಸ್‌ಎಸ್‌ ಹುನ್ನಾರ. ಹೀಗಾಗಿ ಸಂವಿಧಾನವನ್ನು ಪ್ರತಿಪಾದಿಸುವ ಸಚಿವ ಪ್ರಿಯಾಂಕ್‌ ಬೆಳವಣಿಗೆ ಸಹಿಸದೇ ಅವರ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಲಾಗುತ್ತಿದೆ. ಸಮಾಜದಲ್ಲಿ ಕೆಟ್ಟ ಆಲೋಚನೆಗಳಿಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪುಷ್ಟಿಕೊಡುತ್ತಿದೆ. ಪ್ರಿಯಾಂಕ್‌ ಖರ್ಗೆ ಅವರು ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಪ್ಪೇನಿಲ್ಲ. ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ನಾವೆಲ್ಲರೂ ಇದ್ದೇವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಸಂಪೂರ್ಣವಾಗಿ ನಿಷೇಧಿಸಿ : ಅಂಕುಶ ಗೋಖಲೆ

ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಅರವಿಂದಕುಮಾರ್‌ ಅರಳಿ, ಕೆ.ಪುಂಡಲಿಕರಾವ್‌, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಮಹಾನಗರ ಪಾಲಿಕೆ ಅಧ್ಯಕ್ಷ ಮಹಮ್ಮದ್‌ ಗೌಸ್‌, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಪೂಜಾ ಜಾರ್ಜ್ ಸೇರಿದಂತೆ ಪ್ರಮುಖರಾದ ಪಂಡಿತ ಚಿದ್ರಿ, ಅಬ್ದುಲ್‌ ಮನ್ನಾನ್‌ ಸೇಠ್‌, ಚಂದ್ರಕಾಂತ ಹಿಪ್ಪಾಳಗಾಂವ್‌, ಶ್ರೀಕಾಂತ್‌ ಸ್ವಾಮಿ, ವಿಠಲದಾಸ್‌ ಪ್ಯಾಗೆ, ಓಂಪ್ರಕಾಶ ರೊಟ್ಟೆ, ಮಹೇಶ ಗೊರನಾಳಕರ್‌, ವಿನೋದ್‌ ಅಪ್ಪೆ, ಶಿವಮೂರ್ತಿ ಬಳತ್‌ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಹಾಲು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪಕ್ಕೆ ವಿರೋಧ; ವಿಜಯಪುರದಲ್ಲಿ ಎಸ್‌ಯುಸಿಐಸಿ ಪ್ರತಿಭಟನೆ

ನವೆಂಬರ್ 1ರಿಂದ ಜಾರಿಗೆ ಬರುವಂತೆ ಜಾರಿಗೊಳಿಸಿರುವ, ಪ್ರತಿ ಲೀಟರ್‌ ಹಾಲಿಗೆ ₹8...

ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,...

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...