ಬೀದರ್ ಜಿಲ್ಲೆಯಾದ್ಯಂತ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆಗಳನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಮೇ 6ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ಅಧ್ಯಕ್ಷ ವಿನೋದ ರತ್ನಾಕರ ತಿಳಿಸಿದ್ದಾರೆ.
ಜಿಲ್ಲಾಡಳಿತ ವೈಫಲ್ಯ ಖಂಡಿಸಿ ಹಮ್ಮಿಕೊಂಡಿರುವ ಈ ಹೋರಾಟದಲ್ಲಿ ಜಿಲ್ಲೆಯ ಎಲ್ಲ ಬುದ್ಧಿಜೀವಿಗಳು, ಸಮಾಜಪರ ಚಿಂತಕರು, ನಿಜವಾದ ಅಂಬೇಡ್ಕರ್‌ವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಭಾಲ್ಕಿ | ಮೇ 5ರಿಂದ ಒಳಮೀಸಲಾತಿ ಸಮೀಕ್ಷೆ : ಮಾಹಿತಿ ಬಿಟ್ಟು ಹೊಗದಂತೆ ಎಚ್ಚರ ವಹಿಸಿ